ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನ ಮುಂದಿನ ಸೀಸನ್ ಸೆಪ್ಟೆಂಬರ್ 10 ರಿಂದ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಟಗಾರರು ಆಡುತ್ತಾರೆ. ಪ್ರತಿಯೊಂದು ದೇಶವೂ ವಿಭಿನ್ನ ತಂಡವನ್ನು ಹೊಂದಿದೆ. ಭಾರತ, ಪಾಕಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ತಂಡಗಳು ಇದರಲ್ಲಿ ಭಾಗವಹಿಸುತ್ತಿವೆ. ನ್ಯೂಜಿಲೆಂಡ್ ತಂಡ ಮೊದಲ ಬಾರಿಗೆ ಇದರಲ್ಲಿ ಪಾಲ್ಗೊಳ್ಳುತ್ತಿದೆ. ಈ ಎಲ್ಲಾ ತಂಡಗಳ ನಾಯಕರು ಯಾರು ಎಂಬುದನ್ನು ನಾವು ನಿಮಗೆ ಹೇಳುತ್ತಿದ್ದೇವೆ.