IND vs SA: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ?

Updated on: Nov 19, 2025 | 9:53 AM

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಏಕದಿನ ಸಿರೀಸ್ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯು ನವೆಂಬರ್ 30 ರಿಂದ ಆರಂಭವಾಗಲಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಗೆ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ. ಕುತ್ತಿಗೆ ನೋವಿನಿಂದ ಬಳಲುತ್ತಿರುವ ಗಿಲ್​​ಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ. ಇತ್ತ ಶುಭ್​​ಮನ್ ಗಿಲ್ ಹೊರಗುಳಿದರೆ  ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಟೀಮ್ ಇಂಡಿಯಾ ಮುಂದೆ ಹಲವು ಆಯ್ಕೆಗಳಿವೆ. ಇವರಲ್ಲಿ ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

2 / 7
ರೋಹಿತ್ ಶರ್ಮಾ: ಭಾರತ ಏಕದಿನ ತಂಡದ ಯಶಸ್ವಿ ನಾಯಕ ಎನಿಸಿಕೊಂಡಿರುವ ರೋಹಿತ್ ಶರ್ಮಾ 56 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 42 ಮ್ಯಾಚ್​​​ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಹಿಟ್​​ಮ್ಯಾನ್​​​ಗೆ ಕ್ಯಾಪ್ಟನ್ ಪಟ್ಟ ನೀಡಿದರೂ ಅಚ್ಚರಿಪಡಬೇಕಿಲ್ಲ.

3 / 7
ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ 95 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಬರೋಬ್ಬರಿ 65 ಮ್ಯಾಚ್​​ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಹೀಗಾಗಿ ಗಿಲ್ ಸ್ಥಾನಕ್ಕೆ ಕೊಹ್ಲಿಯನ್ನು ತಾತ್ಕಾಲಿಕ ಕ್ಯಾಪ್ಟನ್ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

4 / 7
ಕೆಎಲ್ ರಾಹುಲ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. ಏಕೆಂದರೆ ರಾಹುಲ್ ಈ ಹಿಂದೆ 12 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 8 ಮ್ಯಾಚ್​​​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ರಾಹುಲ್ ಅವರನ್ನು ನಾಯಕನನ್ನಾಗಿ ನೇಮಿಸುವ ಸಾಧ್ಯತೆ ಕೂಡ ಇದೆ.

5 / 7
ರಿಷಭ್ ಪಂತ್: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಶುಭ್​​ಮನ್ ಗಿಲ್ ಹೊರಗುಳಿದರೆ ರಿಷಭ್ ಪಂತ್​ ನಾಯಕನಾಗಿ ಕಾಣಿಸಿಕೊಳ್ಳಬಹುದು. ಏಕೆಂದರೆ ಪಂತ್ ಈಗಾಗಲೇ ಭಾರತ ಟಿ20 ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

6 / 7
ಹಾರ್ದಿಕ್ ಪಾಂಡ್ಯ: ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮೂರು ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಒಮ್ಮೆಯೂ ಟೀಮ್ ಇಂಡಿಯಾ ಸೋತಿರಲಿಲ್ಲ. ಇದೀಗ ಗಿಲ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.

7 / 7
ಶ್ರೇಯಸ್ ಅಯ್ಯರ್: ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದರು. ಒಂದು ವೇಳೆ ನವೆಂಬರ್ 30 ರೊಳಗೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿ ತಂಡಕ್ಕೆ ಮರಳಿದರೆ, ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.