IND vs ENG: ಜಸ್​ಪ್ರೀತ್ ಬುಮ್ರಾ ಬದಲಿ ಆಟಗಾರ ಯಾರು?

| Updated By: ಝಾಹಿರ್ ಯೂಸುಫ್

Updated on: Feb 20, 2024 | 9:53 AM

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ರಾಂಚಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ವೇಗದ ಬೌಲರ್ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ. ಬುಮ್ರಾ ಈ ಪಂದ್ಯದಿಂದ ಹೊರಗುಳಿದರೆ ಅವರ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ.

1 / 7
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಮ್ಯಾಚ್​ಗಳು ಮುಗಿದಿವೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಫೆಬ್ರವರಿ 23 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 7
ಕಳೆದ ಕೆಲ ತಿಂಗಳಿಂದ ಜಸ್​ಪ್ರೀತ್ ಬುಮ್ರಾ ಸತತ ಪಂದ್ಯಗಳನ್ನಾಡುತ್ತಿದ್ದು, ಹೀಗಾಗಿ 4ನೇ ಟೆಸ್ಟ್ ಪಂದ್ಯದ ವೇಳೆ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ರಾಂಚಿಯಲ್ಲಿ ನಡೆಯಲಿರುವ ಮುಂದಿನ ಪಂದ್ಯದ ವೇಳೆ ಬುಮ್ರಾ ಕಣಕ್ಕಿಳಿಯುವುದಿಲ್ಲ ಎಂದೇ ಹೇಳಬಹುದು.

3 / 7
ಇತ್ತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿದರೆ ಅವರ ಸ್ಥಾನದಲ್ಲಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಗಾಯದ ಕಾರಣ ಮೊಹಮ್ಮದ್ ಶಮಿ ಈ ಸರಣಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬದಲಿ ಬೌಲರ್ ಆಯ್ಕೆಯು ಟೀಮ್ ಇಂಡಿಯಾಗೆ ಪಾಲಿಗೆ ಕಂಟಕವಾಗುವ ಸಾಧ್ಯತೆ ಹೆಚ್ಚು.

4 / 7
ಪ್ರಸ್ತುತ ತಂಡದಲ್ಲಿ ವೇಗಿಗಳಾಗಿ ಮುಖೇಶ್ ಕುಮಾರ್ ಹಾಗೂ ಆಕಾಶ್ ದೀಪ್ ಸ್ಥಾನ ಪಡೆದಿದ್ದಾರೆ. ಮುಖೇಶ್ ಕುಮಾರ್ ಈಗಾಗಲೇ ಟೀಮ್ ಇಂಡಿಯಾ ಪರ 3 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ. ಈ ವೇಳೆ 6 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 7 ವಿಕೆಟ್​ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 7
ಮತ್ತೊಂದೆಡೆ ಆಕಾಶ್ ದೀಪ್ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಫಸ್ಟ್​ ಕ್ಲಾಸ್ ಕ್ರಿಕೆಟ್​ನಲ್ಲಿ 30 ಪಂದ್ಯಗಳನ್ನಾಡಿರುವ ಆಕಾಶ್ ಬರೋಬ್ಬರಿ 104 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹೀಗಾಗಿ ಬುಮ್ರಾ ಬದಲಿಗೆ ಬೆಂಗಾಳ್ ವೇಗಿಯನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

6 / 7
ಇನ್ನು ಏಕೈಕ ವೇಗಿಯೊಂದಿಗೆ ಕಣಕ್ಕಿಳಿಯಲು ಬಯಸಿದರೆ ಮೊಹಮ್ಮದ್ ಸಿರಾಜ್ ಮಾತ್ರ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಬುಮ್ರಾ ಬದಲಿಗೆ ಸ್ಪಿನ್ ಆಲ್​ರೌಂಡರ್ ಆಗಿರುವ ಅಕ್ಷರ್ ಪಟೇಲ್ ಅಥವಾ ವಾಷಿಂಗ್ಟನ್ ಸಿಂಗ್ ಸ್ಥಾನ ಪಡೆಯಬಹುದು. ಹೀಗಾಗಿ ರಾಂಚಿಯಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಕುತೂಹಲ.

7 / 7
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ಕೆಎಲ್ ರಾಹುಲ್*, ದೇವದತ್ ಪಡಿಕ್ಕಲ್.