IPL 2025 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

Updated on: Jun 04, 2025 | 11:14 AM

IPL 2025 Award List: ಈ ಬಾರಿಯ ಐಪಿಎಲ್​ನಲ್ಲಿ ಅನುಭವಿ ಆಟಗಾರರನ್ನೇ ಹಿಂದಿಕ್ಕಿ ಯುವ ಎಡಗೈ ದಾಂಡಿಗ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಈ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದು ಕೂಡ ಕೇವಲ 14ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ.

2 / 5
ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಈ ಬಾರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರೆ, ಬೌಲಿಂಗ್​​ನಲ್ಲಿ 25 ವಿಕೆಟ್ ಪಡೆದ ಗುಜರಾತ್ ಟೈಟಾನ್ಸ್ ತಂಡದ ವೇಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

3 / 5
ಅದೇ ರೀತಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 40 ಸಿಕ್ಸ್ ಬಾರಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಿಕೋಲಸ್ ಪೂರನ್ ಪಡೆದಿದ್ದಾರೆ. ಹಾಗೆಯೇ ಈ ಬಾರಿಯ ಟೂರ್ನಿಯ ಮೋಸ್ಟ್ ವ್ಯಾಲುಯೆಬಲ್ ಪ್ಲೇಯರ್ ಪ್ರಶಸ್ತಿ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್ ಪಾಲಾಗಿದೆ.

4 / 5
ಇನ್ನು ಅದ್ಭುತ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿದೆ. ಈ ಬಾರಿಯ ಟೂರ್ನಿಯ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ ಸೂರ್ಯವಂಶಿ, ಚೊಚ್ಚಲ ಪಂದ್ಯಾವಳಿಯಲ್ಲೇ ಪ್ರಮುಖ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
ರಾಜಸ್ಥಾನ್ ರಾಯಲ್ಸ್ ಪರ ಈ ಬಾರಿ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ವೈಭವ್ ಸೂರ್ಯವಂಶಿ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದಾರೆ. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಈ ವರ್ಷದ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದಾರೆ. ಅದರಂತೆ ಸೂಪರ್ ಸ್ಟ್ರೈಕರ್​ಗೆ ನೀಡಲಾಗುವ ಟಾಟಾ ಕರ್ವ್ ಕಾರು 14 ವರ್ಷದ ವೈಭವ್ ಸೂರ್ಯವಂಶಿ ಪಾಲಾಗಿದೆ.

Published On - 11:11 am, Wed, 4 June 25