AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನ 3 ತಂಡಗಳು ಬ್ಯಾನ್, 2 ಟೀಮ್​​ಗಳು ಕ್ಯಾನ್ಸಲ್

IPL: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮುಕ್ತಾಯಗೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ತಂಡಗಳಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡ ಕೂಡ ಒಂದು. ಅಂದರೆ 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡ ಟ್ರೋಫಿ ಎತ್ತಿ ಹಿಡಿದರೂ, ಕೆಲವೇ ವರ್ಷಗಳಲ್ಲಿ ಈ ಫ್ರಾಂಚೈಸಿ ಐಪಿಎಲ್​ನಿಂದ ಕಣ್ಮರೆಯಾಯಿತು.

ಝಾಹಿರ್ ಯೂಸುಫ್
| Edited By: |

Updated on:Jun 09, 2025 | 1:24 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಶುರುವಾಗಿ 18 ವರ್ಷಗಳು ಕಳೆದಿವೆ. ಈ 18 ವರ್ಷಗಳಲ್ಲಿ ಐಪಿಎಲ್​ನಲ್ಲಿ ಬರೋಬ್ಬರಿ 15 ತಂಡಗಳು ಕಣಕ್ಕಿಳಿದಿವೆ. ಈ ಹದಿನೈದು ತಂಡಗಳಲ್ಲಿ 3 ಟೀಮ್​​ಗಳು ಬ್ಯಾನ್ ಆದರೆ, 2 ಫ್ರಾಂಚೈಸಿಗಳನ್ನು ರದ್ದುಗೊಳಿಸಲಾಗಿದೆ. ಹಾಗಿದ್ರೆ ಐಪಿಎಲ್​ನಿಂದ ಕಣ್ಮರೆಯಾದ ಆ 5 ತಂಡಗಳಾವುವು ಎಂದು ನೋಡೋಣ...

1 / 6
ಡೆಕ್ಕನ್ ಚಾರ್ಜರ್ಸ್​: ಚೊಚ್ಚಲ ಐಪಿಎಲ್​ನಲ್ಲಿ ಕಾಣಿಸಿಕೊಂಡ 8 ತಂಡಗಳಲ್ಲಿ ಡೆಕ್ಕನ್ ಚಾರ್ಜರ್ಸ್ ಕೂಡ ಒಂದು. ಹೈದರಾಬಾದ್ ಅನ್ನು ಪ್ರತಿನಿಧಿಸಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು 2012ರವರೆಗೆ ಐಪಿಎಲ್​ನಲ್ಲಿ ಕಣಕ್ಕಿಳಿದಿತ್ತು. ಆದರೆ 2012 ರಲ್ಲಿ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಡೆಕ್ಕನ್ ಚಾರ್ಜರ್ಸ್ ಫ್ರಾಂಚೈಸಿಯನ್ನು ಐಪಿಎಲ್ ಆಡಳಿತ ಮಂಡಳಿಯು ವಜಾಗೊಳಿಸಿತು. ಇದಾದ ಬಳಿಕ ಹೈದರಾಬಾದ್ ಫ್ರಾಂಚೈಸಿಯನ್ನು ಖರೀದಿಸಿದ ಸನ್​ ನೆಟ್​ವರ್ಕ್ ಸಂಸ್ಥೆಯು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಪರಿಚಯಿಸಿದರು.

2 / 6
ಕೊಚ್ಚಿ ಟಸ್ಕರ್ಸ್ ಕೇರಳ: 2011 ರಲ್ಲಿ ಪರಿಚಯಿಸಲಾದ ಹೊಸ ತಂಡಗಳ ಪಟ್ಟಿಯಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ಕೂಡ ಒಂದು. ಆದರೆ ಮೊದಲ ಸೀಸನ್​ನಲ್ಲೇ ಫ್ರ್ಯಾಂಚೈಸ್ ಶುಲ್ಕದ ಭಾಗವಾಗಿರುವ ಶೇಕಡಾ 10 ರಷ್ಟು ಬ್ಯಾಂಕ್ ಗ್ಯಾರಂಟಿಯನ್ನು ಪಾವತಿಸಲು ಕೊಚ್ಚಿ ಟಸ್ಕರ್ಸ್ ಕೇರಳ ತಂಡದ ಮಾಲೀಕರು ವಿಫಲರಾದರು. ಹೀಗಾಗಿ ಕೊಚ್ಚಿ ಟಸ್ಕರ್ಸ್ ಕೇರಳ ತಂಡವನ್ನು ಐಪಿಎಲ್​ನಿಂದ ನಿಷೇಧಿಸಲಾಯಿತು.

3 / 6
ಪುಣೆ ವಾರಿಯರ್ಸ್ ಇಂಡಿಯಾ: 2011 ರಲ್ಲಿ ಐಪಿಎಲ್​ಗೆ ಎಂಟ್ರಿ ಕೊಟ್ಟ ಮತ್ತೊಂದು ತಂಡವೆಂದರೆ ಪುಣೆ ವಾರಿಯರ್ಸ್ ಇಂಡಿಯಾ. ಸಹಾರಾ ಗ್ರೂಪ್ ಸ್ಪೋರ್ಟ್ಸ್ ಲಿಮಿಟೆಡ್ ಒಡೆತನದಲ್ಲಿದ್ದ ಈ ಫ್ರಾಂಚೈಸಿ 2013 ರಲ್ಲಿ  ಹಣಕಾಸಿನ ಸಮಸ್ಯೆಗಳನ್ನು ಎದುರಿಸಿದರು. ಹೀಗಾಗಿ 2013ರ ಬಳಿಕ ಪುಣೆ ವಾರಿಯರ್ಸ್ ಇಂಡಿಯಾ ಫ್ರಾಂಚೈಸಿಯನ್ನು ಬಿಸಿಸಿಐ ರದ್ದುಗೊಳಿಸಿತು. 

4 / 6
ಗುಜರಾತ್ ಲಯನ್ಸ್: 2016 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಐಪಿಎಲ್​ನಿಂದ ಅಮಾನತುಗೊಂಡ ಪರಿಣಾಮ ಗುಜರಾತ್ ಲಯನ್ಸ್ ತಂಡವನ್ನು ಪರಿಚಯಿಸಲಾಯಿತು. ಅದರಂತೆ ಐಪಿಎಲ್​ನಲ್ಲಿ ತಾತ್ಕಾಲಿಕವಾಗಿ ಕಾಣಿಸಿಕೊಂಡಿದ್ದ ಗುಜರಾತ್ ಲಯನ್ಸ್ ಫ್ರಾಂಚೈಸಿಯನ್ನು CSK ಮತ್ತು RR ತಂಡಗಳ ಮರಳುವಿಕೆಯೊಂದಿಗೆ ಟೂರ್ನಿಯಿಂದ ಕೈ ಬಿಡಲಾಯಿತು.

5 / 6
ರೈಸಿಂಗ್ ಪುಣೆ ಸೂಪರ್ ಜೈಂಟ್ಸ್: ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು 2 ವರ್ಷಗಳ ಕಾಲ ಬ್ಯಾನ್ ಆಗಿದ್ದರಿಂದ ಆ ತಂಡಗಳ ಸ್ಥಾನದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಕಣಕ್ಕಿಳಿಸಲಾಗಿತ್ತು. ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಅವರ ಒಡೆತನದಲ್ಲಿದ್ದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಫ್ರಾಂಚೈಸಿಯನ್ನು CSK ಮತ್ತು RR ತಂಡಗಳ ಮರಳುವಿಕೆಯೊಂದಿಗೆ ಕೈ ಬಿಡಲಾಯಿತು.

6 / 6

Published On - 12:56 pm, Mon, 9 June 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?

ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?