AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶಸ್ವಿ ಜೈಸ್ವಾಲ್ ಆಯ್ಕೆಯಾಗದಿರಲು ಇದುವೇ ಅಸಲಿ ಕಾರಣ..!

India's Asia Cup squad: ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಆರಂಭಿಕರಾಗಿ ಸ್ಥಾನ ಪಡೆದಿರುವುದು ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಶುಭ್​ಮನ್ ಗಿಲ್. ಈ ಮೂವರ ಆಯ್ಕೆಯಿಂದಾಗಿ ಯಶಸ್ವಿ ಜೈಸ್ವಾಲ್ 15 ಸದಸ್ಯರ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಇದಾಗ್ಯೂ ಮೀಸಲು ಆಟಗಾರರ ಪಟ್ಟಿಯಲ್ಲಿ ಜೈಸ್ವಾಲ್​ ಅವರನ್ನು ಆಯ್ಕೆ ಮಾಡಲಾಗಿದೆ.

ಝಾಹಿರ್ ಯೂಸುಫ್
|

Updated on: Aug 20, 2025 | 9:54 AM

Share
ಏಷ್ಯಾಕಪ್ ಟಿ20 ಟೂರ್ನಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್​ಗೆ ಸ್ಥಾನ ಲಭಿಸಿಲ್ಲ. ಅತ್ತ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಜೈಸ್ವಾಲ್ ಯಾಕೆ ಸೆಲೆಕ್ಟ್ ಆಗಿಲ್ಲ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೇ ಉತ್ತರ ನೀಡಿದ್ದಾರೆ.

1 / 5
ಏಷ್ಯಾಕಪ್​ಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಆರಂಭಿಕರಾಗಿ ಸ್ಥಾನ ಪಡೆದಿರುವುದು ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಶುಭ್​​ಮನ್ ಗಿಲ್. ಅತ್ತ ಮೂವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ ಕಾರಣ ಜೈಸ್ವಾಲ್ ಅವರನ್ನು ಕೈ ಬಿಡಲಾಗಿದೆ. ಇಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನೇ ಕೈ ಬಿಡಲು ಮುಖ್ಯ ಕಾರಣ ಅಭಿಷೇಕ್ ಶರ್ಮಾ.

2 / 5
ಟೀಮ್ ಇಂಡಿಯಾ ಪರ ಸ್ಫೋಟಕ ಆರಂಭಿಕನಾಗಿ ಗುರುತಿಸಿಕೊಂಡಿರುವ ಅಭಿಷೇಕ್ ಶರ್ಮಾ ಸ್ಪಿನ್ ಆಲ್​ರೌಂಡರ್. ಅತ್ತ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಕಾರಣ ಯಶಸ್ವಿ ಜೈಸ್ವಾಲ್ ಅವರ ಬದಲಿಗೆ ಅಭಿಷೇಕ್ ಶರ್ಮಾ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಅಜಿತ್ ಅಗರ್ಕರ್ ತಿಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಹೆಚ್ಚುವರಿ ಬೌಲರ್​ನನ್ನು ಬಳಸಿಕೊಳ್ಳಲು ಪ್ಲ್ಯಾನ್ ರೂಪಿಸಲಾಗಿದೆ.

3 / 5
ಇತ್ತ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದರೂ, ಅತ್ತ ಅಭಿಷೇಕ್ ಶರ್ಮಾ ಕೂಡ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಅದರ ಜೊತೆಗೆ ಸ್ಪಿನ್ ಮೋಡಿಯೊಂದಿಗೆ ವಿಕೆಟ್ ಕಬಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿಯೇ ಯಶಸ್ವಿ ಜೈಸ್ವಾಲ್ ಅವರನ್ನು ಹಿಂದಿಕ್ಕಿ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಅಭಿಷೇ ಶರ್ಮಾ ಯಶಸ್ವಿಯಾಗಿದ್ದಾರೆ.

4 / 5
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

5 / 5