
ಏಷ್ಯಾಕಪ್ ಟಿ20 ಟೂರ್ನಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ಗೆ ಸ್ಥಾನ ಲಭಿಸಿಲ್ಲ. ಅತ್ತ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಜೈಸ್ವಾಲ್ ಯಾಕೆ ಸೆಲೆಕ್ಟ್ ಆಗಿಲ್ಲ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೇ ಉತ್ತರ ನೀಡಿದ್ದಾರೆ.

ಏಷ್ಯಾಕಪ್ಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಆರಂಭಿಕರಾಗಿ ಸ್ಥಾನ ಪಡೆದಿರುವುದು ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಶುಭ್ಮನ್ ಗಿಲ್. ಅತ್ತ ಮೂವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ ಕಾರಣ ಜೈಸ್ವಾಲ್ ಅವರನ್ನು ಕೈ ಬಿಡಲಾಗಿದೆ. ಇಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನೇ ಕೈ ಬಿಡಲು ಮುಖ್ಯ ಕಾರಣ ಅಭಿಷೇಕ್ ಶರ್ಮಾ.

ಟೀಮ್ ಇಂಡಿಯಾ ಪರ ಸ್ಫೋಟಕ ಆರಂಭಿಕನಾಗಿ ಗುರುತಿಸಿಕೊಂಡಿರುವ ಅಭಿಷೇಕ್ ಶರ್ಮಾ ಸ್ಪಿನ್ ಆಲ್ರೌಂಡರ್. ಅತ್ತ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಕಾರಣ ಯಶಸ್ವಿ ಜೈಸ್ವಾಲ್ ಅವರ ಬದಲಿಗೆ ಅಭಿಷೇಕ್ ಶರ್ಮಾ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಅಜಿತ್ ಅಗರ್ಕರ್ ತಿಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಹೆಚ್ಚುವರಿ ಬೌಲರ್ನನ್ನು ಬಳಸಿಕೊಳ್ಳಲು ಪ್ಲ್ಯಾನ್ ರೂಪಿಸಲಾಗಿದೆ.

ಇತ್ತ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದರೂ, ಅತ್ತ ಅಭಿಷೇಕ್ ಶರ್ಮಾ ಕೂಡ ಅದ್ಭುತ ಫಾರ್ಮ್ನಲ್ಲಿದ್ದಾರೆ. ಅದರ ಜೊತೆಗೆ ಸ್ಪಿನ್ ಮೋಡಿಯೊಂದಿಗೆ ವಿಕೆಟ್ ಕಬಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿಯೇ ಯಶಸ್ವಿ ಜೈಸ್ವಾಲ್ ಅವರನ್ನು ಹಿಂದಿಕ್ಕಿ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಅಭಿಷೇ ಶರ್ಮಾ ಯಶಸ್ವಿಯಾಗಿದ್ದಾರೆ.

ಏಷ್ಯಾ ಕಪ್ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.