Ashwin: ಅಶ್ವಿನ್ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ..!
TV9 Web | Updated By: ಝಾಹಿರ್ ಯೂಸುಫ್
Updated on:
Feb 17, 2024 | 9:36 AM
India vs England 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ (112) ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಪರ ಬೆನ್ ಡಕೆಟ್ (133) ಸೆಂಚುರಿ ಸಿಡಿಸಿದ್ದಾರೆ.
1 / 7
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ (R Ashwin) ಕಣಕ್ಕಿಳಿದಿಲ್ಲ. 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ್ದ ಅಶ್ವಿನ್ ಶನಿವಾರದ ದಿನದಾಟಕ್ಕೆ ಅಲಭ್ಯರಾಗಿದ್ದಾರೆ.
2 / 7
ಇದಕ್ಕೆ ಮುಖ್ಯ ಕಾರಣ ರವಿಚಂದ್ರನ್ ಅಶ್ವಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿರುವುದು. 2ನೇ ದಿನದಾಟದ ಮುಕ್ತಾಯದ ಬೆನ್ನಲ್ಲೇ ಅಶ್ವಿನ್ ಅವರಿಗೆ ಕುಟುಂಬದ ಕಡೆಯಿಂದ ಕರೆ ಬಂದಿದ್ದು, ಹೀಗಾಗಿ ಅವರು ಮೂರನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.
3 / 7
ಕೆಲ ಮೂಲಗಳ ಮಾಹಿತಿ ಪ್ರಕಾರ, ಅಶ್ವಿನ್ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ತಾಯಿಯ ಶುಶ್ರೂಷೆಗಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇದೇ ಕಾರಣದಿಂದಾಗಿ ಅವರು 3ನೇ ಟೆಸ್ಟ್ ಪಂದ್ಯದ ಉಳಿದ ದಿನದಾಟಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
4 / 7
ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 10+1 ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಅಂದರೆ ಭಾರತ ತಂಡಕ್ಕೆ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಆದರೆ ಆತನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶ ಇರುವುದಿಲ್ಲ.
5 / 7
ಐಸಿಸಿ ನಿಯಮದ ಪ್ರಕಾರ, ಕೋವಿಡ್ ಕಾರಣದಿಂದ ಅಥವಾ ಗಾಯಗೊಂಡು ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದರೆ, ಆತನ ಬದಲಿಗೆ ಆಯ್ಕೆಯಾಗುವ ಆಟಗಾರನಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಲು ಅವಕಾಶವಿದೆ. ಆದರೆ ಅಶ್ವಿನ್ ವೈಯುಕ್ತಿಕ ಕಾರಣಗಳಿಂದಾಗಿ ಇದೀಗ ಭಾರತ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಬರುವ ಪ್ಲೇಯರ್ ಫೀಲ್ಡರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.
6 / 7
ಅದರಂತೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ 10 ಬ್ಯಾಟರ್ಗಳೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಓರ್ವ ಬೌಲರ್ನ ಕೊರತೆಯೊಂದಿಗೆ ಬೌಲಿಂಗ್ ಮಾಡಲಿದೆ. ಅಂದರೆ ಆಲ್ರೌಂಡರ್ ಆಗಿರುವ ಅಶ್ವಿನ್ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.
7 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ (ಅಲಭ್ಯ).