AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಬಾಬರ್ ಆಝಂ, ರಿಝ್ವಾನ್​ರನ್ನು ಕೈ ಬಿಡಲು ಇದುವೇ ಅಸಲಿ ಕಾರಣ..!

Asia Cup 2025: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಪಾಕಿಸ್ತಾನ್ ತಂಡವು ಸೆಪ್ಟೆಂಬರ್ 12 ರಂದು ಒಮಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಭಾರತ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on: Aug 18, 2025 | 9:05 AM

Share
ಏಷ್ಯಾಕಪ್ ಟಿ20 ಟೂರ್ನಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಮಾಜಿ ನಾಯಕರುಗಳಾದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಅಂದರೆ ತಂಡದ ಸ್ಟಾರ್ ಆಟಗಾರರನ್ನೇ ಕೈ ಬಿಟ್ಟು ಯುವ ಪಡೆಯನ್ನು ಒಳಗೊಂಡ ಬಳಗವನ್ನು ಪಿಸಿಬಿ ಘೋಷಿಸಿದೆ.

1 / 6
ಇದರ ಬೆನ್ನಲ್ಲೇ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಅವರನ್ನು ಕೈ ಬಿಡಲು ಕಾರಣವೇನು? ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಕೇಳಿ ಬಂದ ಮೊದಲ ಉತ್ತರ ಸ್ಟ್ರೈಕ್ ರೇಟ್. ಆದರೆ ಅದು ಅವರ ಟಿ20 ವೃತ್ತಿಜೀವನದ ಸ್ಟ್ರೈಕ್ ರೇಟ್​ ಅನ್ನು ಪರಿಗಣಿಸಿ ಅಲ್ಲ ಎಂಬುದು ವಿಶೇಷ. ಬದಲಾಗಿ ಟೂರ್ನಮೆಂಟ್​ಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಇಬ್ಬರನ್ನು ಕೈ ಬಿಡಲಾಗಿದೆ.

2 / 6
ಬಾಬರ್ ಆಝಂ ಬಹು ತಂಡಗಳನ್ನು ಒಳಗೊಂಡ ಟೂರ್ನಿಗಳಲ್ಲಿ ಈವರೆಗೆ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 612 ರನ್​ಗಳು. ಅಂದರೆ ಮಲ್ಟಿ ಟೀಮ್ಸ್ ಟೂರ್ನಿಗಳಲ್ಲಿ ಬಾಬರ್ ಅವರ ಅವರೇಜ್ ಕೇವಲ 30 ರನ್​ಗಳು ಮಾತ್ರ. ಇನ್ನು ಸ್ಟ್ರೈಕ್ ರೇಟ್ ಇರುವುದು 111.3 ಮಾತ್ರ ಎಂದರೆ ನಂಬಲೇಬೇಕು. ಅಂದರೆ ಪ್ರಮುಖ ಟೂರ್ನಿಗಳಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ ಎಂಬುದು ಸ್ಪಷ್ಟ.

3 / 6
ಇನ್ನು ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಅವರ ಕಥೆ ಕೂಡ ಭಿನ್ನವಾಗಿಲ್ಲ. ಬಹು ತಂಡಗಳನ್ನು ಒಳಗೊಂಡ ಟೂರ್ನಿಯಲ್ಲಿ ರಿಝ್ವಾನ್ ಕೂಡ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 44ರ ಸರಾಸರಿಯಲ್ಲಿ ಒಟ್ಟು 792 ರನ್​ ಕಲೆಹಾಕಿದ್ದಾರೆ. ಅದು ಸಹ 114.6ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದೇ ಅಚ್ಚರಿ.

4 / 6
ಅಂದರೆ ಇಲ್ಲಿ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಬಹು ತಂಡಗಳ ಟೂರ್ನಮೆಂಟ್​ನಲ್ಲಿ 115 ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿಯೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಬಾಬರ್ ಹಾಗೂ ರಿಝ್ವಾನ್ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಿಲ್ಲ. ಇತ್ತ ಏಷ್ಯಾಕಪ್​ಗೆ ಆಯ್ಕೆಯಾದ ಪಾಕಿಸ್ತಾನ್ ತಂಡ ಈ ಕೆಳಗಿನಂತಿದೆ...

5 / 6
ಏಷ್ಯಾಕಪ್​ಗೆ ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

6 / 6
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ