AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನ್ ದಿಢೀರ್ ನಿವೃತ್ತಿಗೆ ಯಾರು ಕಾರಣ? ಇಲ್ಲಿದೆ ಅಸಲಿ ವಿಷಯ

Ravichandran Ashwin retirement: ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾ ಪರ 287 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 379 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 5833.3 ಓವರ್​​ಗಳನ್ನು ಎಸೆದಿದ್ದಾರೆ. ಇದರ ನಡುವೆ 947 ಮೇಡನ್ ಓವರ್ ಎಸೆದಿರುವ ಅವರು ಒಟ್ಟು 765 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 18, 2024 | 12:53 PM

Share
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮಧ್ಯೆಯೇ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ಗ್ಯಾಲರಿಯಲ್ಲಿ ಕೂತು ತಮ್ಮ ಕೆರಿಯರ್ ಕೊನೆಗೊಳಿಸುವ ಮೂಲಕ ಎಂಬುದೇ ಅಚ್ಚರಿ. ಅಂದರೆ ಐದು ಪಂದ್ಯಗಳ ಈ ಸರಣಿಗೆ ಆಯ್ಕೆಯಾದ ಅಶ್ವಿನ್ ಮೊದಲ ಮ್ಯಾಚ್​ನಲ್ಲಿ ಚಾನ್ಸ್​ ನೀಡಿರಲಿಲ್ಲ.

1 / 6
ಇನ್ನು ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಶ್ವಿನ್ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಬ್ರಿಸ್ಬೇನ್ ಟೆಸ್ಟ್ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡಲಾಗಿತ್ತು. ಈ ಪಂದ್ಯದ ವೇಳೆ ಬೆಂಚ್ ಕಾದಿದ್ದ ಅಶ್ವಿನ್ ಮ್ಯಾಚ್ ಮುಗಿಯುತ್ತಿದ್ದಂತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ನಿವೃತ್ತಿ ಘೋಷಿಸಿದರು.

2 / 6
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿರುವುದು ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದನ್ನು ಹುಟ್ಟು ಹಾಕಿದ್ದಾರೆ.

3 / 6
ಏಕೆಂದರೆ ಈ ಸರಣಿಯ ಮೂಲಕ ಅಶ್ವಿನ್ ನಿವೃತ್ತರಾಗಲು ನಿರ್ಧರಿಸಿದ್ದರೆ, ಸರಣಿ ಆರಂಭಕ್ಕೂ ಮುನ್ನ ಅವರು ಅದನ್ನು ತಿಳಿಸುತ್ತಿದ್ದರು. ಆದರೆ ಸರಣಿಯ ನಡುವೆಯೇ ಅವರು ದಿಢೀರ್ ನಿವೃತ್ತಿ ನೀಡಿರುವುದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

4 / 6
ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ನೀಡುವುದಾಗಿ ಬಿಸಿಸಿಐ ತಿಳಿಸಿದೆ. ಅವರಲ್ಲಿ ಒಬ್ಬರು ಅಶ್ವಿನ್ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

5 / 6
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸೂಚನೆ ಮೇರೆಗೆ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ತೆಗದು ಹಾಕುವಂತಹ ದೃಢ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತುಗಳು ಈ ಸರಣಿ ಆರಂಭಕ್ಕೂ ಮುನ್ನ ಕೇಳಿಬಂದಿತ್ತು. ಇದೀಗ ಅಶ್ವಿನ್ ಅವರ ದಿಢೀರ್ ನಿವೃತ್ತಿಯು ಈ ಮಾತುಗಳನ್ನು ನಿಜವಾಗಿಸಿದೆ. ಹೀಗಾಗಿಯೇ ಸರಣಿ ಮಧ್ಯದಲ್ಲೇ ರವಿಚಂದ್ರನ್ ಅಶ್ವಿನ್ ತಮ್ಮ ಕೆರಿಯರ್ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ

ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ

ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್

ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ