- Kannada News Photo gallery Cricket photos Why Mayank Yadav Is Not Picked For T20I Series vs South Africa
ಒಂದೇ ಸರಣಿಗೆ ಸುಸ್ತಾದ ಸ್ಪೀಡ್ಸ್ಟರ್ ಮಯಾಂಕ್ ಯಾದವ್
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ.
Updated on: Oct 28, 2024 | 8:57 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಯುವ ವೇಗಿ ಮಯಾಂಕ್ ಯಾದವ್ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ. ಇದರ ಬೆನ್ನಲ್ಲೇ ಒಂದೇ ಸರಣಿಗೆ ಮಯಾಂಕ್ ಯಾದವ್ ಸುಸ್ತಾದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಮಯಾಂಕ್ ಯಾದವ್ ಇತ್ತೀಚೆಗಷ್ಟೇ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯ ಮೂಲಕ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಆದರೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

ನವೆಂಬರ್ 8 ರಿಂದ ಶುರುವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮಯಾಂಕ್ ಅಲಭ್ಯರಾಗಿದ್ದಾರೆ. ಇದಕ್ಕೆ ಕಾರಣ ಭುಜದ ನೋವು. ಇದರ ಬೆನ್ನಲ್ಲೇ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಆಟಗಾರನನ್ನು ಬಾಂಗ್ಲಾ ವಿರುದ್ಧದ ಸರಣಿಗೆ ಹೇಗೆ ಆಯ್ಕೆ ಮಾಡಿದ್ದೀರಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಮಯಾಂಕ್ ಯಾದವ್ ಕಳೆದ ಬಾರಿಯ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದು ಕೇವಲ 4 ಮ್ಯಾಚ್ಗಳು ಮಾತ್ರ. ಈ ನಾಲ್ಕು ಪಂದ್ಯಗಳಿಂದ 7 ವಿಕೆಟ್ ಕಬಳಿಸಿದ್ದರು. ಇದರ ನಡುವೆ 150 ರ ಅಸುಪಾಸಿನಲ್ಲಿ ಚೆಂಡೆಸೆಯುವ ಮೂಲಕ ಯುವ ವೇಗಿ ಆಯ್ಕೆಗಾರರ ಗಮನ ಸೆಳೆದಿದ್ದರು.

ಆದರೆ ಈ ಮೂರು ಮ್ಯಾಚ್ಗಳ ಬಳಿಕ ಗಾಯಗೊಂಡ ಮಯಾಂಕ್ ಯಾದವ್ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದಾದ ಬಳಿಕ ನೇರವಾಗಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು. ಈ ಎಂಟ್ರಿಯ ಬೆನ್ನಲ್ಲೇ ಇದೀಗ ಭುಜದ ನೋವಿನೊಂದಿಗೆ ತಂಡದಿಂದ ಹೊರಗುಳಿದಿದ್ದಾರೆ.

ಹೀಗಾಗಿಯೇ ಮಯಾಂಕ್ ಯಾದವ್ ಅವರನ್ನು ಐಪಿಎಲ್ ಬೆನ್ನಲ್ಲೇ ಟೀಮ್ ಇಂಡಿಯಾಗೆ ಯಾವ ಮಾನದಂಡದ ಮೇಲೆ ಆಯ್ಕೆ ಮಾಡಿದ್ದೀರಿ ಎಂದು ಅನೇಕರು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಇದೀಗ ಯುವ ಆಟಗಾರನ ಫಿಟ್ನೆಸ್ ಸಮಸ್ಯೆ ಕೂಡ ಸೇರ್ಪಡೆಯಾಗಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಪ್ರದರ್ಶನದ ಮೂಲಕವೇ ಉತ್ತರ ನೀಡಬೇಕಾದ ಮಯಾಂಕ್ ಯಾದವ್ ಫಿಟ್ನೆಸ್ ಸಮಸ್ಯೆಯ ಕಾರಣ ಸೌತ್ ಆಫ್ರಿಕಾ ಸರಣಿಯಿಂದಲೂ ಹೊರಗುಳಿದಿದ್ದಾರೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.









