ಒಂದೇ ಸರಣಿಗೆ ಸುಸ್ತಾದ ಸ್ಪೀಡ್​ಸ್ಟರ್ ಮಯಾಂಕ್ ಯಾದವ್

|

Updated on: Oct 28, 2024 | 8:57 AM

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ.

1 / 7
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಯುವ ವೇಗಿ ಮಯಾಂಕ್ ಯಾದವ್ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ. ಇದರ ಬೆನ್ನಲ್ಲೇ ಒಂದೇ ಸರಣಿಗೆ ಮಯಾಂಕ್ ಯಾದವ್ ಸುಸ್ತಾದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 7
ಏಕೆಂದರೆ ಮಯಾಂಕ್ ಯಾದವ್ ಇತ್ತೀಚೆಗಷ್ಟೇ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯ ಮೂಲಕ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಆದರೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

3 / 7
ನವೆಂಬರ್ 8 ರಿಂದ ಶುರುವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮಯಾಂಕ್ ಅಲಭ್ಯರಾಗಿದ್ದಾರೆ. ಇದಕ್ಕೆ ಕಾರಣ ಭುಜದ ನೋವು. ಇದರ ಬೆನ್ನಲ್ಲೇ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಆಟಗಾರನನ್ನು ಬಾಂಗ್ಲಾ ವಿರುದ್ಧದ ಸರಣಿಗೆ ಹೇಗೆ ಆಯ್ಕೆ ಮಾಡಿದ್ದೀರಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಮಯಾಂಕ್ ಯಾದವ್ ಕಳೆದ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳಿಂದ 7 ವಿಕೆಟ್ ಕಬಳಿಸಿದ್ದರು. ಇದರ ನಡುವೆ 150 ರ ಅಸುಪಾಸಿನಲ್ಲಿ ಚೆಂಡೆಸೆಯುವ ಮೂಲಕ ಯುವ ವೇಗಿ ಆಯ್ಕೆಗಾರರ ಗಮನ ಸೆಳೆದಿದ್ದರು.

5 / 7
ಆದರೆ ಈ ಮೂರು ಮ್ಯಾಚ್​ಗಳ ಬಳಿಕ ಗಾಯಗೊಂಡ ಮಯಾಂಕ್ ಯಾದವ್ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದಾದ ಬಳಿಕ ನೇರವಾಗಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು. ಈ ಎಂಟ್ರಿಯ ಬೆನ್ನಲ್ಲೇ ಇದೀಗ ಭುಜದ ನೋವಿನೊಂದಿಗೆ ತಂಡದಿಂದ ಹೊರಗುಳಿದಿದ್ದಾರೆ.

6 / 7
ಹೀಗಾಗಿಯೇ ಮಯಾಂಕ್ ಯಾದವ್ ಅವರನ್ನು ಐಪಿಎಲ್ ಬೆನ್ನಲ್ಲೇ ಟೀಮ್ ಇಂಡಿಯಾಗೆ ಯಾವ ಮಾನದಂಡದ ಮೇಲೆ ಆಯ್ಕೆ ಮಾಡಿದ್ದೀರಿ ಎಂದು ಅನೇಕರು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಇದೀಗ ಯುವ ಆಟಗಾರನ ಫಿಟ್​ನೆಸ್ ಸಮಸ್ಯೆ ಕೂಡ ಸೇರ್ಪಡೆಯಾಗಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಪ್ರದರ್ಶನದ ಮೂಲಕವೇ ಉತ್ತರ ನೀಡಬೇಕಾದ ಮಯಾಂಕ್ ಯಾದವ್ ಫಿಟ್​​ನೆಸ್ ಸಮಸ್ಯೆಯ ಕಾರಣ ಸೌತ್ ಆಫ್ರಿಕಾ ಸರಣಿಯಿಂದಲೂ ಹೊರಗುಳಿದಿದ್ದಾರೆ.

7 / 7
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.