IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್ಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನುಳಿದ 6 ಮ್ಯಾಚ್ಗಳಲ್ಲಿ ಗೆದ್ದರೆ ಮಾತ್ರ ಮುಂಬೈ ಇಂಡಿಯನ್ಸ್ ತಂಡವು ಪ್ಲೇಆಫ್ಗೇರಬಹುದು.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ.
1 / 6
ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್ ಹಾಗೂ ಡಗೌಟ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ...
2 / 6
ಏಪ್ರಿಲ್ 12ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಅವರ ಹ್ಯಾಮ್‌ಸ್ಟ್ರಿಂಗ್ (Hamstring injury) ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದಾದ ಬಳಿಕ ಅವರು ಯಾವುದೇ ಪಂದ್ಯವಾಡಿಲ್ಲ.
3 / 6
ರೋಹಿತ್ ಶರ್ಮಾ ಅವರ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತದ ಸಮಸ್ಯೆಯು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿಯೇ ಹಿಟ್ಮ್ಯಾನ್ ತಂಡದೊಂದಿಗೆ ಕಾಣಿಸಿಕೊಂಡರೂ ಮೈದಾನಕ್ಕಿಳಿಯುತ್ತಿಲ್ಲ. ಅಲ್ಲದೆ ತಮ್ಮ ಕೆರಿಯರ್ನ ಅಂಚಿನಲ್ಲಿರುವ ರೋಹಿತ್ ಶರ್ಮಾ ಕೂಡ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ.
4 / 6
ಅಂದರೆ 2027ರ ಏಕದಿನ ವಿಶ್ವಕಪ್ ಆಡುವ ಇರಾದೆ ಹೊಂದಿರುವ ರೋಹಿತ್ ಶರ್ಮಾ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್ ಆದ ಮೇಲೆ ಮಾತ್ರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅತ್ತ ಮುಂಬೈ ಇಂಡಿಯನ್ಸ್ ಟೀಮ್ ಮ್ಯಾನೇಜ್‌ಮೆಂಟ್ ಅವರ ನಿರ್ಧಾರಕ್ಕೆ ಬೆಂಬಲವಾಗಿ ನಿಂತಿದ್ದಾರೆ.
5 / 6
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಆದರೆ ಇತ್ತ ಹಿಟ್ಮ್ಯಾನ್ ಅನುಪಸ್ಥಿತಿಯು ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರಿರುವುದಂತು ನಿಜ. ಪರಿಣಾಮ ಹಾರ್ದಿಕ್ ಪಾಂಡ್ಯ ಪಡೆ ಕಳೆದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಹೀಗಾಗಿಯೇ ಹಿಟ್ಮ್ಯಾನ್ ಶೀಘ್ರದಲ್ಲೇ ಚೇತರಿಸಿಕೊಂಡು ಮೈದಾನಕ್ಕೆ ಮರಳುವುದನ್ನು ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.