ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ!

Updated on: Apr 30, 2026 | 12:52 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನುಳಿದ 6 ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಮುಂಬೈ ಇಂಡಿಯನ್ಸ್ ತಂಡವು ಪ್ಲೇಆಫ್​ಗೇರಬಹುದು.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ.

2 / 6

ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್​ ಹಾಗೂ ಡಗೌಟ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ...

3 / 6

ಏಪ್ರಿಲ್ 12ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಅವರ ಹ್ಯಾಮ್‌ಸ್ಟ್ರಿಂಗ್ (Hamstring injury) ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದಾದ ಬಳಿಕ ಅವರು ಯಾವುದೇ ಪಂದ್ಯವಾಡಿಲ್ಲ.

4 / 6

ರೋಹಿತ್ ಶರ್ಮಾ ಅವರ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತದ ಸಮಸ್ಯೆಯು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ತಂಡದೊಂದಿಗೆ ಕಾಣಿಸಿಕೊಂಡರೂ ಮೈದಾನಕ್ಕಿಳಿಯುತ್ತಿಲ್ಲ. ಅಲ್ಲದೆ ತಮ್ಮ ಕೆರಿಯರ್​ನ ಅಂಚಿನಲ್ಲಿರುವ ರೋಹಿತ್ ಶರ್ಮಾ ಕೂಡ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ.

5 / 6

ಅಂದರೆ 2027ರ ಏಕದಿನ ವಿಶ್ವಕಪ್​ ಆಡುವ ಇರಾದೆ ಹೊಂದಿರುವ ರೋಹಿತ್ ಶರ್ಮಾ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್​ ಆದ ಮೇಲೆ ಮಾತ್ರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅತ್ತ ಮುಂಬೈ ಇಂಡಿಯನ್ಸ್ ಟೀಮ್ ಮ್ಯಾನೇಜ್‌ಮೆಂಟ್ ಅವರ ನಿರ್ಧಾರಕ್ಕೆ ಬೆಂಬಲವಾಗಿ ನಿಂತಿದ್ದಾರೆ.

6 / 6

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಆದರೆ ಇತ್ತ ಹಿಟ್​ಮ್ಯಾನ್ ಅನುಪಸ್ಥಿತಿಯು ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರಿರುವುದಂತು ನಿಜ. ಪರಿಣಾಮ ಹಾರ್ದಿಕ್ ಪಾಂಡ್ಯ ಪಡೆ ಕಳೆದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಹೀಗಾಗಿಯೇ ಹಿಟ್​ಮ್ಯಾನ್ ಶೀಘ್ರದಲ್ಲೇ ಚೇತರಿಸಿಕೊಂಡು ಮೈದಾನಕ್ಕೆ ಮರಳುವುದನ್ನು ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

Published On - 12:52 pm, Thu, 30 April 26

Loading...
Unable to load recommendations.
Follow Us