ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯಕ್ಕೆ ಇನ್ನು ಕೇವಲ 2 ದಿನ ಮಾತ್ರ ಉಳಿದಿದೆ. 3 ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಅಂದಹಾಗೆ, ಮೊದಲ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ನಾಯಕ ಹೊರಗುಳಿಯುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿತ್ತು. ಆದರೆ, ಯಾವ ಕಾರಣಕ್ಕೆ ರೋಹಿತ್ ಆಡುತ್ತಿಲ್ಲ ಎಂಬುದು ತಿಳಿದಿರಲಿಲ್ಲ. ಆದರೆ ಇದೀಗ ಆ ಕಾರಣ ಬಹಿರಂಗಗೊಂಡಿದೆ.
ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದಾಗ ವೈಯಕ್ತಿಕ ಕಾರಣದಿಂದ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಏಕದಿನ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.
ಇದೀಗ ರಾಷ್ಟ್ರೀಯ ಮಾಧ್ಯಮಗಳ ಸುದ್ದಿಯ ಪ್ರಕಾರ, ರೋಹಿತ್ ಶರ್ಮಾ ತನ್ನ ಬಾಮೈದುನನ ಮದುವೆಯಲ್ಲಿ ಭಾಗವಹಿಸುವ ಸಲುವಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದ್ದು, ಈ ಸರಣಿಯ ಎರಡನೇ ಪಂದ್ಯದಿಂದ ರೋಹಿತ್ ಶರ್ಮಾ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ.
ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ/ ಮೊದಲ ಪಂದ್ಯಕ್ಕಿಲ್ಲ),ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕಟ್,
Published On - 5:30 pm, Wed, 15 March 23