IND vs SL: ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ಗೆ ಚಾನ್ಸ್ ಸಿಗದಿರಲು ಇದುವೇ ಕಾರಣ
TV9 Web | Updated By: ಝಾಹಿರ್ ಯೂಸುಫ್
Updated on:
Jan 10, 2023 | 1:58 PM
India vs Sri Lanka 1st Odi: ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಕಣಕ್ಕಿಳಿಯುವ ಬಳಗವನ್ನು ಘೋಷಿಸಿದರು. ಅಚ್ಚರಿ ಎಂಬಂತೆ ಈ 11 ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಹೆಸರು ಇರಲಿಲ್ಲ.
1 / 8
ಗುವಾಹಟಿಯಲ್ಲಿ ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದುಸನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅತ್ತ ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಕಣಕ್ಕಿಳಿಯುವ ಬಳಗವನ್ನು ಘೋಷಿಸಿದರು.
2 / 8
ಅಚ್ಚರಿ ಎಂಬಂತೆ ಈ 11 ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಹೆಸರು ಇರಲಿಲ್ಲ. ಇದರ ಬೆನ್ನಲ್ಲೇ ಅತ್ಯುತ್ತಮ ಫಾರ್ಮ್ನಲ್ಲಿರುವ ಇಬ್ಬರು ಆಟಗಾರರನ್ನು ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಡಲು ಕಾರಣವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
3 / 8
ಇಲ್ಲಿ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕಾರಣ ಇಶಾನ್ ಕಿಶನ್ ಅವಕಾಶ ವಂಚಿತರಾಗಿದ್ದಾರೆ. ಅಂದರೆ ಕಿಶನ್ಗಿಂತ ಗಿಲ್ ಏಕದಿನ ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಯುವ ಎಡಗೈ ದಾಂಡಿಗನ ಬದಲು ಗಿಲ್ಗೆ ಅವಕಾಶ ನೀಡಲಾಗಿದೆ.
4 / 8
2022 ರಲ್ಲಿ 12 ಏಕದಿನ ಪಂದ್ಯಗಳನ್ನು ಆಡಿರುವ ಶುಭ್ಮನ್ ಗಿಲ್ ಒಟ್ಟು 638 ರನ್ ಗಳಿಸಿದ್ದಾರೆ. ಈ ವೇಳೆ 1 ಶತಕ ಮತ್ತು ನಾಲ್ಕು ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.
5 / 8
ಮತ್ತೊಂದೆಡೆ ಕಳೆದ ವರ್ಷ 7 ಏಕದಿನ ಇನಿಂಗ್ಸ್ ಆಡಿರುವ ಇಶಾನ್ ಕಿಶನ್ ಕಲೆಹಾಕಿರುವುದು 417 ರನ್ಗಳು. ಇದರಲ್ಲಿ ಇತ್ತೀಚೆಗೆ ಬಾಂಗ್ಲಾದೇಶ್ ವಿರುದ್ಧ ಸಿಡಿಸಿದ ವಿಶ್ವ ದಾಖಲೆಯ ದ್ವಿಶತಕ ಕೂಡ ಸೇರಿದೆ. ಹೀಗಾಗಿಯೇ ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ಶುಭ್ಮನ್ ಗಿಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
6 / 8
ಇನ್ನು ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. 2022 ರಲ್ಲಿ 15 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ 1 ಶತಕ ಹಾಗೂ 6 ಅರ್ಧಶತಕದೊಂದಿಗೆ 724 ರನ್ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
7 / 8
2022 ರಲ್ಲಿ 12 ಏಕದಿನ ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ ಕಲೆಹಾಕಿರುವುದು ಕೇವಲ 260 ರನ್ಗಳು ಮಾತ್ರ. ಅಂದರೆ ಟಿ20 ಕ್ರಿಕೆಟ್ನಲ್ಲಿ ಮಿಂಚುತ್ತಿರುವ ಸೂರ್ಯ ಏಕದಿನ ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣದಿಂದಾಗಿ ಶ್ರೇಯಸ್ ಅಯ್ಯರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಕಲ್ಪಿಸಲಾಗಿದೆ.
8 / 8
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
Published On - 1:53 pm, Tue, 10 January 23