Virat Kohli: ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಕಾರಣವೇನು?
Virat Kohli: ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.
Updated on:Jan 11, 2024 | 2:48 PM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ (Virat Kohli) ಅಲಭ್ಯರಾಗಿದ್ದಾರೆ. ಇದಾಗ್ಯೂ 2ನೇ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. 2022ರ ಟಿ20 ವಿಶ್ವಕಪ್ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ ಆ ಬಳಿಕ ಚುಟುಕು ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅವರು ಮೊದಲ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ವಾಮಿಕಾ ಹುಟ್ಟುಹಬ್ಬ. ಜನವರಿ 11 ರಂದು ವಿರಾಟ್ ಕೊಹ್ಲಿಯ ಮಗಳ ಬರ್ತ್ ಡೇ. ಹೀಗಾಗಿ ಆ ದಿನ ಮಗಳಿಗಾಗಿ ಮೀಸಲಿಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಇದಾಗ್ಯೂ ಇಂದೋರ್ನಲ್ಲಿ ನಡೆಯಲಿರುವ 2ನೇ ಟಿ20 ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವುದಾಗಿ ವಿರಾಟ್ ಕೊಹ್ಲಿ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.

ಅದರಂತೆ ಜನವರಿ 14 ರಂದು ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಈ ಕಂಬ್ಯಾಕ್ ಮೂಲಕ ಟಿ20 ವಿಶ್ವಕಪ್ನಲ್ಲೂ ಕಣಕ್ಕಿಳಿಯುವುದನ್ನು ಕಿಂಗ್ ಕೊಹ್ಲಿ ಖಚಿತಪಡಿಸಲಿದ್ದಾರೆ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).
Published On - 7:37 am, Thu, 11 January 24



















