ಭಾರತ ತಂಡಕ್ಕೆ ಯಶ್ ದಯಾಳ್ ಆಯ್ಕೆ ಯಾಕೆ? ಇಲ್ಲಿದೆ ಅಸಲಿ ಕಾರಣ

ಯಶ್ ದಯಾಳ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 14 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು ಒಟ್ಟು 15 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಅವರನ್ನು ಈ ಬಾರಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಯಶ್ ದಯಾಳ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

|

Updated on: Sep 09, 2024 | 8:53 AM

 ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ತಂಡದಲ್ಲಿ ಹೊಸಮುಖವಾಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ದಯಾಳ್​ ಅವರ ಆಯ್ಕೆಗೆ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟೀಮ್ ಇಂಡಿಯಾ ಸಂಭವನೀಯ ಆಟಗಾರರ ಪಟ್ಟಿಯಲ್ಲಿ ಯಶ್ ದಯಾಳ್ ಹೆಸರು ಕಾಣಿಸಿಕೊಂಡೇ ಇರಲಿಲ್ಲ. ಆದರೀಗ ದಿಢೀರನೇ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

1 / 5
ಇದಕ್ಕೆ ಮುಖ್ಯ ಕಾರಣ ಎಡಗೈ ವೇಗಿ ಎಂಬುದು. ಏಕೆಂದರೆ ಭಾರತ ಟೆಸ್ಟ್ ತಂಡದಲ್ಲಿ ಯಾವುದೇ ಎಡಗೈ ವೇಗಿಯಿಲ್ಲ. ಹೀಗಾಗಿಯೇ ಖಲೀಲ್ ಅಹ್ಮದ್, ಅರ್ಷದೀಪ್ ಸಿಂಗ್ ಹಾಗೂ ಯಶ್ ದಯಾಳ್ ಅವರ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಖಲೀಲ್ ಅಹ್ಮದ್ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು.

2 / 5
ಆದರೆ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಖಲೀಲ್ ಅಹ್ಮದ್ ನೀರಸ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಆಯ್ಕೆ ಸಮಿತಿ ಬದಲಿ ಎಡಗೈ ವೇಗಿಯ ಆಯ್ಕೆಗೆ ಮುಂದಾಗಿದ್ದಾರೆ. ಇತ್ತ ಭಾರತ ಬಿ ತಂಡದ ಪರ ಕಣಕ್ಕಿಳಿದಿದ್ದ ದಯಾಳ್ ಮೊದಲ ಪಂದ್ಯದಲ್ಲಿ ಒಟ್ಟು 4 ವಿಕೆಟ್ ಕಬಳಿಸಿದ್ದರು. ಇದು ಅತ್ಯುತ್ತಮವಲ್ಲದಿದ್ದರೂ ಫಸ್ಟ್ ಕ್ರಿಕೆಟ್​ನಲ್ಲಿನ ಪ್ರದರ್ಶನವನ್ನು ಪರಿಗಣಿಸಿ ದಯಾಳ್ ಅವರನ್ನು ಎಡಗೈ ವೇಗಿಯಾಗಿ ಆಯ್ಕೆ ಮಾಡಿದ್ದಾರೆ.

3 / 5
ಯಶ್ ದಯಾಳ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 24 ಪಂದ್ಯಗಳಲ್ಲಿ 44 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 4415 ಎಸೆತಗಳನ್ನು ಎಸೆದಿರುವ ಅವರು 2196 ರನ್ ನೀಡಿ 76 ವಿಕೆಟ್ ಕಬಳಿಸಿದ್ದಾರೆ. ಈ ಪ್ರದರ್ಶನವನ್ನು ಪರಿಗಣಿಸಿ ಇದೀಗ ಎಡಗೈ ವೇಗಿಯಾಗಿ 26 ವರ್ಷದ ಯಶ್ ದಯಾಳ್ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅದರಂತೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ದಯಾಳ್ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

5 / 5
Follow us
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ

ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು

ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ

ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ

ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು

ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ

4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ

ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ