Updated on: Jul 11, 2023 | 10:08 PM
India vs West Indies 1st Test: ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಬುಧವಾರದಿಂದ ಶುರುವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಪಾದರ್ಪಣೆ ಮಾಡುವ ಸಾಧ್ಯತೆಯಿದೆ.
ಒಂದು ವೇಳೆ ಜೈಸ್ವಾಲ್ಗೆ ತಂಡದಲ್ಲಿ ಸ್ಥಾನ ಸಿಕ್ಕರೆ, ಶುಭ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಹಾಗೆಯೇ ರೋಹಿತ್ ಶರ್ಮಾ ಜೊತೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಬಹುದು.
ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಕೆಎಸ್ ಭರತ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಚೊಚ್ಚಲ ಟೆಸ್ಟ್ ಪಂದ್ಯಕ್ಕಾಗಿ ಇಶಾನ್ ಕಿಶನ್ ಇನ್ನೊಂದು ಪಂದ್ಯದವರೆಗೆ ಕಾಯಬೇಕಾಗಿ ಬರಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ರೋಹಿತ್ ಶರ್ಮಾ
ಯಶಸ್ವಿ ಜೈಸ್ವಾಲ್
ಶುಭ್ಮನ್ ಗಿಲ್
ವಿರಾಟ್ ಕೊಹ್ಲಿ
ಅಜಿಂಕ್ಯ ರಹಾನೆ
ಕೆಎಸ್ ಭರತ್
ರವೀಂದ್ರ ಜಡೇಜಾ
ರವಿಚಂದ್ರನ್ ಅಶ್ವಿನ್
ಜಯದೇವ್ ಉನಾದ್ಕತ್
ಮೊಹಮ್ಮದ್ ಸಿರಾಜ್
ಶಾರ್ದೂಲ್ ಠಾಕೂರ್
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.