ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ದ್ವಿತೀಯ ಪಂದ್ಯ ನಡೆದಿದ್ದ ಗಯಾನದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲೇ ಈ ಪಂದ್ಯ ಕೂಡ ನಡೆಯಲಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಇಂದಿನದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.