SA20 ಲೀಗ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಸಿಡಿಸಿದ ಆರ್​ಸಿಬಿ ಆಟಗಾರ ..!

|

Updated on: Jan 19, 2024 | 2:57 PM

Will Jacks: ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಪರ ಕೇವಲ 42 ಎಸೆತಗಳಲ್ಲಿ 101 ರನ್​ಗಳ ಇನ್ನಿಂಗ್ಸ್ ಆಡಿದ ವಿಲ್ ಜ್ಯಾಕ್ಸ್ ಎಸ್‌ಎ20 ಟೂರ್ನಿಯ ಇತಿಹಾಸದಲ್ಲಿ ಅತಿವೇಗದ ಶತಕ ಬಾರಿಸಿದ ದಾಖಲೆಯನ್ನೂ ನಿರ್ಮಿಸಿದ್ದಾರೆ.

1 / 7
ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಎಸ್​ಎ20 ಲೀಗ್​ನಲ್ಲಿ ಜನವರಿ 18 ರಂದು ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಡರ್ಬನ್ ಸೂಪರ್‌ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡ 17 ರನ್​ಗಳ ರೋಚಕ ಜಯ ಸಾಧಿಸಿತು.

2 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡ ವಿಲ್ ಜ್ಯಾಕ್ಸ್ ಅವರ ಸಿಡಿಲಬ್ಬರದ ಶತಕದ ನೆರವಿನಿಂದ 204 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡರ್ಬನ್ ಸೂಪರ್‌ಜೈಂಟ್ಸ್ ತಂಡ 20 ಓವರ್​ಗಳಲ್ಲಿ ಕೇವಲ 187 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

3 / 7
ಇನ್ನು ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಪರ ಕೇವಲ 42 ಎಸೆತಗಳಲ್ಲಿ 101 ರನ್​ಗಳ ಇನ್ನಿಂಗ್ಸ್ ಆಡಿದ ವಿಲ್ ಜ್ಯಾಕ್ಸ್ ಎಸ್‌ಎ20 ಟೂರ್ನಿಯ ಇತಿಹಾಸದಲ್ಲಿ ಅತಿವೇಗದ ಶತಕ ಬಾರಿಸಿದ ದಾಖಲೆಯನ್ನೂ ನಿರ್ಮಿಸಿದ್ದಾರೆ.

4 / 7
ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದ ವಿಲ್ ಜ್ಯಾಕ್ಸ್, 22 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 8 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಸಹ ಬಾರಿಸಿದರು. ಇದು ಟಿ20ಯಲ್ಲಿ ಅವರ ಎರಡನೇ ಶತಕವಾಗಿದ್ದು, ಈ 25 ವರ್ಷದ ಬ್ಯಾಟ್ಸ್‌ಮನ್ ಕಳೆದ ಪಂದ್ಯದಲ್ಲಿ 58 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

5 / 7
ಹಾಗೆಯೇ ಇಂಗ್ಲೆಂಡ್ ಪರ, ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ಆಟಗಾರನ ಜಂಟಿ ಎರಡನೇ ವೇಗದ ಶತಕವಾಗಿದೆ. ಈ ವಿಚಾರದಲ್ಲಿ 2015ರಲ್ಲಿ ನ್ಯಾಟ್ ವೆಸ್ಟ್ ಟಿ20 ಬ್ಲಾಸ್ಟ್​ನಲ್ಲಿ ನಾರ್ಥಾಂಪ್ಟನ್ ಶೈರ್ ವಿರುದ್ಧದ ಪಂದ್ಯದಲ್ಲಿ 40 ಎಸೆತಗಳಲ್ಲಿ ಶತಕ ಸಿಡಿಸಿದ ಡೇವಿಡ್ ವಿಲ್ಲಿ ಹೆಸರು ಮೊದಲ ಸ್ಥಾನದಲ್ಲಿದೆ.

6 / 7
2018 ರಲ್ಲಿ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಂತರ, ವಿಲ್ ಜ್ಯಾಕ್ಸ್ ಈ ಸ್ವರೂಪದಲ್ಲಿ 146 ಪಂದ್ಯಗಳಲ್ಲಿ 30 ಕ್ಕಿಂತ ಹೆಚ್ಚು ಸರಾಸರಿಯೊಂದಿಗೆ 3800 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 30 ಅರ್ಧ ಶತಕಗಳು ಸೇರಿವೆ. ಜ್ಯಾಕ್ಸ್ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11 ಟಿ20, 7 ಏಕದಿನ ಮತ್ತು 2 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

7 / 7
ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಸೀಸನ್​ನಲ್ಲಿ ವಿಲ್ ಜ್ಯಾಕ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. ಕಳೆದ ಸೀಸನ್​ನಲ್ಲಿ RCB ಅವರನ್ನು 3 ಕೋಟಿ 20 ಲಕ್ಷ ರೂಪಾಯಿಗಳಿಗೆ ಖರೀದಿಸಿತು. ಆದರೆ ಪಂದ್ಯಾವಳಿಯ ಆರಂಭದ ಮೊದಲು, ಅವರು ಗಾಯದ ಕಾರಣದಿಂದಾಗಿ ಆಡಲು ಸಾಧ್ಯವಾಗಲಿಲ್ಲ.