AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರ ಸಿಡಿಲಬ್ಬರ… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ

Will Malajczuk Century Record: ಆಸ್ಟ್ರೇಲಿಯಾ ಕಿರಿಯರ ತಂಡದ ಆರಂಭಿಕ ಬ್ಯಾಟರ್ ವಿಲ್ ಮಲಾಚೆಕ್ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಅಂಡರ್​-19 ವಿಶ್ವಕಪ್​ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈ ಶತಕದೊಂದಿಗೆ ಪಾಕಿಸ್ತಾನ್ ಬ್ಯಾಟರ್​ನ ಹೆಸರಿನಲ್ಲಿದ್ದ ಭರ್ಜರಿ ಶತಕದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 21, 2026 | 2:29 PM

Share
ಅಂಡರ್-19 ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಯುವ ದಾಂಡಿಗ ವಿಲ್ ಮಲಾಚೆಕ್ (Will Malajczuk). ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. 

1 / 5
ನಮೀಬಿಯಾದ ವಿಂಡ್​ಹೋಕ್​ನಲ್ಲಿರುವ ಎಸಿಜಿ ಮೈದಾನದಲ್ಲಿ ನಡೆದ ಅಂಡರ್​-19 ವಿಶ್ವಕಪ್​​ನ 16ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಪಾನ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

2 / 5
ಈ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಎಡಗೈ ದಾಂಡಿಗ ವಿಲ್ ಮಲಾಚೆಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಆರ್ಭಟ ಶುರು ಮಾಡಿದ್ದ ವಿಲ್ ಶತಕ ಪೂರೈಸಿದ್ದು ಕೇವಲ 51 ಎಸೆತಗಳಲ್ಲಿ. ಈ ಮೂಲಕ ಅಂಡರ್-19 ವಿಶ್ವಕಪ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.

3 / 5
ಈ ಮೊದಲು ಈ ವಿಶ್ವ ದಾಖಲೆ ಪಾಕಿಸ್ತಾನದ ಖಾಸಿಂ ಅಖ್ತರ್ ಹೆಸರಿನಲ್ಲಿತ್ತು. 2022 ರ ಅಂಡರ್-19 ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧ ಖಾಸಿಂ ಅಖ್ತರ್ ಕೇವಲ 63 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಕಿರಿಯ ವಿಶ್ವಕಪ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ವಿಶ್ವ ದಾಖಲೆಯನ್ನು ವಿಲ್ ಮಲಾಚೆಕ್ ಉಡೀಸ್ ಮಾಡಿದ್ದಾರೆ. ಜಪಾನ್ ವಿರುದ್ಧ ಕೇವಲ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ವಿಲ್ 102 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು 29.1 ಓವರ್​ಗಳಲ್ಲಿ 204 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5

Published On - 2:29 pm, Wed, 21 January 26

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್

ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ