RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ
IPL 2026 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ರಾಯ್ಪುರ್ನಲ್ಲಿ ನಡೆಯಲಿರುವ ಈ ಮ್ಯಾಚ್ನಲ್ಲಿ ಆರ್ಸಿಬಿ ಪರ ಹೊಡಿಬಡಿ ದಾಂಡಿಗ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ಕುತೂಹಲ.
Updated on: May 13, 2026 | 7:30 AM

ಏಪ್ರಿಲ್ 18 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಏಕೆಂದರೆ ಗಾಯದ ಕಾರಣ ಇಂಗ್ಲೆಂಡ್ಗೆ ತೆರಳಿದ್ದ ಫಿಲ್ ಸಾಲ್ಟ್ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿಯೇ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಆರ್ಸಿಬಿ ಪರ ಮತ್ತೆ ಇನಿಂಗ್ಸ್ ಆರಂಭಿಸಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಸದ್ಯದ ಉತ್ತರ ಇಲ್ಲ. ಏಕೆಂದರೆ ಮಂಗಳವಾರ ನಡೆದ ಆರ್ಸಿಬಿ ತಂಡದ ಅಭ್ಯಾಸದ ವೇಳೆ ಫಿಲ್ ಸಾಲ್ಟ್ ಕಾಣಿಸಿಕೊಂಡಿಲ್ಲ. ಹೀಗಾಗಿ ಕೊಲ್ಲತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಅಂದರೆ ಫಿಲ್ ಸಾಲ್ಟ್ ಅವರ ಬೆರಳಿಗೆ ಆದ ಗಾಯ ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ವೈದ್ಯರು ಕೆಲ ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ರಾಯ್ಪುರ್ನಲ್ಲಿ ನಡೆದ ಆರ್ಸಿಬಿ ತಂಡದ ಅಭ್ಯಾಸಕ್ಕೆ ಫಿಲ್ ಸಾಲ್ಟ್ ಗೈರಾಗಿದ್ದಾರೆ ಎಂದು ವರದಿಯಾಗಿದೆ.

ಫಿಲ್ ಸಾಲ್ಟ್ ಅಲಭ್ಯತೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಮುಂದುವರೆಸಲಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿಯೊಂದಿಗೆ ಯುವ ಎಡಗೈ ದಾಂಡಿಗ ಆರಂಭಿಕನಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.




