AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shikhar Dhawan: ಕ್ರಿಕೆಟಿಕ ಶಿಖರ್ ಧವನ್ ರಾಜಕೀಯಕ್ಕೆ ಎಂಟ್ರಿ; ಈ ಬಗ್ಗೆ ಗಬ್ಬರ್ ಹೇಳಿದ್ದೇನು ಗೊತ್ತಾ?

Shikhar Dhawan: ನಾನು ರಾಜಕೀಯಕ್ಕೆ ಸೇರಬೇಕು ಎಂಬುದು ದೇವರ ಇಚ್ಛೆಯಾಗಿದ್ದರೆ, ನಾನು ಖಂಡಿತವಾಗಿಯೂ ಅದನ್ನು ಮಾಡುತ್ತೇನೆ ಎಂದಿದ್ದಾರೆ.

TV9 Web
| Edited By: |

Updated on:Mar 27, 2023 | 3:55 PM

Share
ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ಆರಂಭಿಕ ಆಟಗಾರ ಶಿಖರ್ ಧವನ್​ಗೆ ಟೀಂ ಇಂಡಿಯಾದ ಕದ ಭಾಗಶಃ ಮುಚ್ಚಿದಂತ್ತಾಗಿದೆ. ಧವನ್ ಜಾಗವನ್ನು ಶುಭ್​ಮನ್ ಗಿಲ್ ಆಕ್ರಮಿಸಿಕೊಂಡಿರುವುದರಿಂದ ಧವನ್​ಗೆ ಮತ್ತೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಗುವುದು ಅಸಾಧ್ಯ. ಹೀಗಾಗಿ ಟಿ20 ಲೀಗ್​ ಕಡೆ ಹೆಚ್ಚು ಗಮನ ಹರಿಸುತ್ತಿರುವ ಧವನ್, ಐಪಿಎಲ್​ನಲ್ಲಿ ಪಂಜಾಬ್ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ.

1 / 5
ಇತ್ತ ಐಪಿಎಲ್​ನಲ್ಲೂ ಧವನ್ ಪ್ರದರ್ಶನ ಹೇಳಿಕೊಳ್ಳುವಂತಿರದಿದ್ದರೆ, ಅಲ್ಲೂ ಕೂಡ ಅವರಿಗೆ ಖಾಯಂ ಜಾಗ ಸಿಗುವುದು ಕಷ್ಟ. ಹೀಗಾಗಿ ತನ್ನ ಮುಂದಿನ ಭವಿಷ್ಯದತ್ತ ಗಮನಹರಿಸುತ್ತಿರುವ ಧವನ್​ಗೆ ರಾಜಕೀಯಕ್ಕೆ ಬರುವ ಆಸಕ್ತಿಯ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರಿಸಿರುವ ಧವನ್ ತನ್ನ ಮುಂದಿನ ರಾಜಕೀಯದ ನಡೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

2 / 5
ವಾಸ್ತವವಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ, 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಜಕೀಯಕ್ಕೆ ಸೇರುವ ಯೋಜನೆ ಬಗ್ಗೆ ಧವನ್ ಬಳಿ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿರುವ ಧವನ್, ಪ್ರಸ್ತುತ ಅಂತಹ ಯಾವುದೇ ಯೋಜನೆಗಳಿಲ್ಲ. ಆದರೆ ಭವಿಷ್ಯದಲ್ಲಿ ಅಂತಹ ಯಾವುದೇ ಅವಕಾಶ ಸಿಕ್ಕರೆ, ನಾನು ಅದರಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

3 / 5
ಈ ಬಗ್ಗೆ ಮುಂದುವರೆದು ಮಾತನಾಡಿರುವ ಧವನ್, ನಾನು ಯಾವ ಕ್ಷೇತ್ರಕ್ಕೆ ಹೋದರೂ ನಾನು ನನ್ನ 100 ಪ್ರತಿಶತವನ್ನು ನೀಡುತ್ತೇನೆ. ಇದರಿಂದ ಯಶಸ್ಸು ಖಚಿತ ಎಂದು ನನಗೆ ತಿಳಿದಿದೆ. ಇಲ್ಲಿಯವರೆಗೆ, ನಾನು ರಾಜಕೀಯಕ್ಕೆ ಸೇರುವ ನನ್ನ ಯೋಜನೆಗಳ ಬಗ್ಗೆ ಯಾರೊಂದಿಗೂ ಮಾತನಾಡಿಲ್ಲ. ಆದರೆ ದೇವರ ಇಚ್ಛೆ ಏನು ಎಂಬುದು ನಮಗೆ ತಿಳಿದಿಲ್ಲ. ನಾನು ರಾಜಕೀಯಕ್ಕೆ ಸೇರಬೇಕು ಎಂಬುದು ದೇವರ ಇಚ್ಛೆಯಾಗಿದ್ದರೆ, ನಾನು ಖಂಡಿತವಾಗಿಯೂ ಅದನ್ನು ಮಾಡುತ್ತೇನೆ ಎಂದಿದ್ದಾರೆ.

4 / 5
2022 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ತಮ್ಮ ಕೊನೆಯ ಏಕದಿನ ಪಂದ್ಯವನ್ನಾಡಿದ್ದ ಧವನ್, ಅಂದಿನಿಂದ ಭಾರತೀಯ ತಂಡದಿಂದ ಹೊರಗುಳಿದಿದ್ದಾರೆ. 2010 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ ದೆಹಲಿ ಮೂಲದ ಧವನ್, 50 ಓವರ್‌ಗಳ ಸ್ವರೂಪದಲ್ಲಿ 167 ಪಂದ್ಯಗಳಲ್ಲಿ 6793 ರನ್ ಬಾರಿಸಿದ್ದಾರೆ.

5 / 5

Published On - 3:54 pm, Mon, 27 March 23

TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್