T20 World Cup 2021: ಭರ್ಜರಿ ಗೆಲುವಿನೊಂದಿಗೆ ದಾಖಲೆ ಬರೆದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Nov 06, 2021 | 5:33 PM

India vs Scotland: ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

1 / 5
ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಕೇವಲ 85 ರನ್​ಗೆ ಆಲೌಟ್ ಆಯಿತು.

2 / 5
 ಈ ಸಾಧಾರಣ ಸವಾಲು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದರು. ಈ ಜೋಡಿ 5 ಓವರ್​ನಲ್ಲಿ 70 ರನ್ ಬಾರಿಸಿ ಭರ್ಜರಿ ಜೊತೆಯಾಟವಾಡಿದ್ದರು.

3 / 5
ಅದರಂತೆ ಟೀಮ್ ಇಂಡಿಯಾ ಕೇವಲ 6.3 ಓವರ್​ನಲ್ಲಿ ಗೆಲುವು ದಾಖಲಿಸಿತು. ಅಂದರೆ 39 ಬಾಲ್​ನಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 81 ಎಸೆತಗಳನ್ನು ಬಾಕಿ ಉಳಿಸಿದರು.

4 / 5
ಇದು ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ದಾಖಲೆಯಾಗಿದೆ. ಇದಕ್ಕೂ ಮುನ್ನ2016 ರಲ್ಲಿ ಯುಎಇ ವಿರುದ್ದ ಭಾರತ 59 ಬಾಲ್ ಬಾಕಿ ಇರುವಾಗ ಗೆದ್ದಿರುವುದು ದಾಖಲೆಯಾಗಿತ್ತು. ಇದೀಗ 81 ಎಸೆತಗಳು ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

5 / 5
ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

Published On - 3:35 pm, Sat, 6 November 21