
2026 ರ ಮಹಿಳಾ ಏಷ್ಯಾಕಪ್ ಶುಕ್ರವಾರದಿಂದ ಅಂದರೆ ಆಗಸ್ಟ್ 28 ರಿಂದ ಆರಂಭವಾಗಿದೆ. ಈ ವರ್ಷ, ಟೂರ್ನಮೆಂಟ್ ಟಿ20 ಮಾದರಿಯಲ್ಲಿ ನಡೆಯಲಿದೆ. ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಕೂಡ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಪಂದ್ಯಾವಳಿಯನ್ನು ಪ್ರವೇಶಿಸಿದೆ. ಹಾಗಿದ್ದರೆ ಟಿ20 ಏಷ್ಯಾಕಪ್ನಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ ಎಂಬುದನ್ನು ನೋಡೋಣ(PC-PTI).
ಭಾರತ ಮಹಿಳಾ ತಂಡವು ಟಿ20 ಏಷ್ಯಾಕಪ್ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಒಟ್ಟಾರೆಯಾಗಿ, ಭಾರತ ಟಿ20 ಏಷ್ಯಾಕಪ್ನಲ್ಲಿ 25 ಪಂದ್ಯಗಳನ್ನು ಆಡಿದೆ. ಈ 25 ಪಂದ್ಯಗಳಲ್ಲಿ ಹರ್ಮನ್ಪ್ರೀತ್ ಕೌರ್ ಪಡೆ 21 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಕೇವಲ ನಾಲ್ಕರಲ್ಲಿ ಮಾತ್ರ ಸೋತಿದೆ. ಹಾಗೆಯೇ ಭಾರತ ತಂಡವು ಮೂರು ಬಾರಿ ಟಿ20 ಏಷ್ಯಾ ಕಪ್ ಗೆದ್ದಿದೆ(PC-PTI).
ಟೀಂ ಇಂಡಿಯಾ 2012, 2016 ಮತ್ತು 2022 ರಲ್ಲಿ ಟ್ರೋಫಿಯನ್ನು ಗೆದ್ದಿದ್ದು, ಈ ಬಾರಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ತಂಡದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭ ನೀಡುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಟೂರ್ನಮೆಂಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯರಲ್ಲಿ ಮಂಧಾನ ಕೂಡ ಒಬ್ಬರು(PC-PTI).
ಜೆಮಿಮಾ ರೊಡ್ರಿಗಸ್ ಅನುಪಸ್ಥಿತಿಯಲ್ಲಿ, ನಾಯಕಿ ಹರ್ಮನ್ಪ್ರೀತ್ ಕೌರ್ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಹೊರಲಿದ್ದಾರೆ. ರಿಷಾ ಘೋಷ್ ಮತ್ತು ದೀಪ್ತಿ ಶರ್ಮಾ ಈ ಪಂದ್ಯಾವಳಿಯಲ್ಲಿ ತಂಡಕ್ಕೆ ಟ್ರಂಪ್ ಕಾರ್ಡ್‌ಗಳಾಗಿದ್ದಾರೆ. ಬೌಲಿಂಗ್ ವಿಭಾಗದಲ್ಲಿ, ಕ್ರಾಂತಿ ಗೌಡ್ ಮತ್ತು ರೇಣುಕಾ ಠಾಕೂರ್ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಶ್ರೀ ಚರಣಿ ಮತ್ತು ರಾಧಾ ಯಾದವ್ ಸ್ಪಿನ್ ವಿಭಾಗದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ(PC-PTI).
ಏಷ್ಯಾಕಪ್‌ಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಭಾರತಿ ಫುಲ್‌ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ಜಿ. ಕಮಲಿನಿ (ವಿಕೆಟ್‌ಕೀಪರ್), ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ನಂದನಿ ಶರ್ಮಾ, ಕ್ರಾಂತಿ ಗೌಡ್, ಪ್ರತೀಕಾ ರಾವಲ್(PC-PTI).