AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವುಮೆನ್ಸ್ ಏಷ್ಯಾಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

ಎಂಟು ತಂಡಗಳೊಂದಿಗೆ ಶುರುವಾದ ಮಹಿಳಾ ಏಷ್ಯಾ ಕಪ್ ಟೂರ್ನಿ ಇದೀಗ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಗಿದ್ದು, ಸೆಮಿಫೈನಲ್ ಪಂದ್ಯಗಳು ಸೆಪ್ಟೆಂಬರ್ 10 ಮತ್ತು 11 ರಂದು ದುಬೈನಲ್ಲಿ ಜರುಗಲಿವೆ. ಭಾರತ, ಬಾಂಗ್ಲಾದೇಶ್, ಶ್ರೀಲಂಕಾ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯಲಿರುವ ಈ ಮಹತ್ವದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಝಾಹಿರ್ ಯೂಸುಫ್
|

Updated on:Sep 09, 2026 | 11:05 AM

Share
ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2026 ಟೂರ್ನಿಯು ಈಗ ಅತ್ಯಂತ ರೋಚಕ ಘಟ್ಟಕ್ಕೆ ತಲುಪಿದೆ. ಗ್ರೂಪ್ ಹಂತದ ಭರ್ಜರಿ ಪೈಪೋಟಿಯ ಬಳಿಕ ಅಗ್ರ ನಾಲ್ಕು ತಂಡಗಳಾದ ಭಾರತ, ಬಾಂಗ್ಲಾದೇಶ್, ಶ್ರೀಲಂಕಾ ಮತ್ತು ಪಾಕಿಸ್ತಾನ್ ಸೆಮಿಫೈನಲ್ ಹಂತಕ್ಕೆ ಅಧಿಕೃತವಾಗಿ ಲಗ್ಗೆ ಇಟ್ಟಿವೆ. (PC: ACC)

1 / 5
ಇನ್ನು ಮಹಿಳಾ ಏಷ್ಯಾ ಕಪ್ 2026 ರ ಗ್ರೂಪ್ ಹಂತದ ಪಂದ್ಯಗಳ ಮುಕ್ತಾಯದ ನಂತರ ಥೈಲ್ಯಾಂಡ್, ಹಾಂಗ್ ಕಾಂಗ್, ಯುಎಇ ಮತ್ತು ಇಂಡೋನೇಷ್ಯಾ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಅದರಂತೆ ಮುಂದಿನ ಸುತ್ತಿನಲ್ಲಿ ಸೆಮಿಫೈನಲ್​ನಲ್ಲಿ ಭಾರತ, ಬಾಂಗ್ಲಾದೇಶ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. (PC: ACC)

2 / 5
ಭಾರತ ಮತ್ತು ಬಾಂಗ್ಲಾದೇಶ್ (ಸೆಮಿಫೈನಲ್ 1): ಸೆಪ್ಟೆಂಬರ್ 10 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದೆ. (PC: ACC)

3 / 5
ಶ್ರೀಲಂಕಾ ಮತ್ತು ಪಾಕಿಸ್ತಾನf (ಸೆಮಿಫೈನಲ್ 2): ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್​ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಶ್ರೀಲಂಕಾ ತಂಡವು ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಇನ್ನು ಸೆಮಿಫೈನಲ್ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಶುರುವಾಗಲಿದೆ. (PC: ACC)

4 / 5
ಭಾರತ vs ಪಾಕಿಸ್ತಾನ್ ಮತ್ತೆ ಮುಖಾಮುಖಿ? ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಅದರಂತೆ, ಸೆಪ್ಟೆಂಬರ್ 13 ರಂದು ದುಬೈನಲ್ಲಿ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಈ ಸಾಂಪ್ರದಾಯಿಕ ಎದುರಾಳಿಗಳು ಸೆಣಸಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ. (PC: ACC)

5 / 5

Published On - 11:04 am, Wed, 9 September 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us