ಮಹಿಳಾ ಏಷ್ಯಾಕಪ್ ಫೈನಲ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಶಫಾಲಿ

Updated on: Sep 13, 2026 | 10:37 PM

ದುಬೈನಲ್ಲಿ ನಡೆದ 2026 ರ ಮಹಿಳಾ ಏಷ್ಯಾಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ಸ್ಫೋಟಕ ಅರ್ಧಶತಕ ಬಾರಿಸಿ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ಈ ವರ್ಷ ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ. ಮಂಧಾನ ಅವರನ್ನು ಹಿಂದಿಕ್ಕಿ 668 ರನ್​ಗಳೊಂದಿಗೆ ಅಗ್ರಸ್ಥಾನಕ್ಕೇರಿದರು.

1 / 5
2026 ರ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಸ್ಫೋಟಕ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಸುಭದ್ರ ಸ್ಥಿತಿಯಲ್ಲಿರಿಸಿದ್ದಾರೆ(PC-BCCI Women x).

2026 ರ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಸ್ಫೋಟಕ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಸುಭದ್ರ ಸ್ಥಿತಿಯಲ್ಲಿರಿಸಿದ್ದಾರೆ(PC-BCCI Women x).

2 / 5

ಈ ಪಂದ್ಯದಲ್ಲಿ ಮಂಧಾನ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಶಫಾಲಿ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ಟೀಂ ಇಂಡಿಯಾ ಪವರ್‌ಪ್ಲೇನ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 57 ರನ್ ಗಳಿಸಿತು. ಇದರಲ್ಲಿಶಫಾಲಿ ವರ್ಮಾ 38 ರನ್ ಬಾರಿಸಿದರೆ, ಸ್ಮೃತಿ ಮಂಧಾನ 19 ರನ್​ಗಳ ಕಾಣಿಕೆ ನೀಡಿದರು(PC-BCCI Women x).

3 / 5

ಪವರ್‌ಪ್ಲೇ ಮುಗಿದ ಬಳಿಕವೂ ತನ್ನ ಎಂದಿನ ಆಟವನ್ನು ಮುಂದುವರೆಸಿದ ಶಫಾಲಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಶಫಾಲಿ ಅವರ ಈ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್​ಗಳು ಸೇರಿದ್ದವು. ಅಂತಿಮವಾಗಿ ಶಫಾಲಿ 39 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 68 ರನ್ ಬಾರಿಸಿ ತಮ್ಮ ಇನ್ನಿಂಗ್ಸ್ ಮುಗಿಸಿದರು(PC-BCCI Women x).

4 / 5

ಈ ಅರ್ಧಶತಕದೊಂದಿಗೆ ಈ ವರ್ಷದಲ್ಲಿ ಅಂದರೆ 2026 ರಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಶಫಾಲಿ ವರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಇದುವರೆಗೆ 21 ಟಿ20 ಇನ್ನಿಂಗ್ಸ್​ಗಳಲ್ಲಿ ಶಫಾಲಿ 151 ರ ಸ್ಟ್ರೈಕ್​ ರೇಟ್​ನಲ್ಲಿ 668 ರನ್ ಕಲೆಹಾಕಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಅಗ್ರಸ್ಥಾನದಲ್ಲಿದ್ದ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಹಿಂದಿಕ್ಕಿದ್ದಾರೆ(PC-BCCI Women x).

5 / 5

ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿರುವ ಸ್ಮೃತಿ ಮಂಧಾನ 640 ರನ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿರುವ ನಾಯಕಿ ಹರ್ಮನ್‌ಪ್ರೀತ್ ಕೌರ್ 489 ರನ್ ಬಾರಿಸಿದ್ದರೆ, ಜೆಮೀಮಾ ರೊಡ್ರಿಗಸ್ 345 ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿರುವ ರಿಚಾ ಘೋಷ್ 252 ರನ್ ಬಾರಿಸಿದ್ದಾರೆ(PC-BCCI Women x).

Published On - 9:05 pm, Sun, 13 September 26

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us