AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಸಮೀಪಿಸುತ್ತಿರುವ ಬೆನ್ನಲ್ಲೇ ಗಾಯಕ್ಕೆ ತುತ್ತಾದ ಜೆಮಿಮಾ ರೊಡ್ರಿಗಸ್

Jemimah Rodrigues Injury: ಮಹಿಳಾ ಏಷ್ಯಾಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಭಾರತದ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಮಂಡಿರಜ್ಜು ಗಾಯದಿಂದಾಗಿ ದಿ ಹಂಡ್ರೆಡ್ ಲೀಗ್‌ನಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ ನೀಡಿದೆ. ಏಷ್ಯಾಕಪ್‌ಗೆ ಜೆಮಿಮಾ ಲಭ್ಯತೆ ಅನುಮಾನವಾಗಿದ್ದು, ನಾಯಕ ಹರ್ಮನ್​ಪ್ರೀತ್ ಕೌರ್ ನೇತೃತ್ವದ ತಂಡದ ಗೆಲುವಿನ ನಿರೀಕ್ಷೆಗೆ ಇದು ಹಿನ್ನಡೆಯಾಗಿದೆ. ಅವರ ಅನುಪಸ್ಥಿತಿ ತಂಡದ ಮೇಲೆ ಪರಿಣಾಮ ಬೀರಲಿದೆ.

ಪೃಥ್ವಿಶಂಕರ
|

Updated on: Aug 08, 2026 | 8:45 PM

Share
2026 ರ ಮಹಿಳಾ ಏಷ್ಯಾಕಪ್ ಇದೇ ತಿಂಗಳ ಅಂತ್ಯದಲ್ಲಿ ಆರಂಭವಾಗಲಿದೆ. ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿನ್ನೆಯಷ್ಟೇ ಪ್ರಕಟಿಸಿತ್ತು. ಇನ್ನು ಈ ಪಂದ್ಯಾವಳಿಗೆ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಹರ್ಮನ್​ಪ್ರೀತ್ ಕೌರ್ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ.

1 / 5
ತಂಡದ ಅನುಭವಿ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಗಾಯಕ್ಕೆ ತುತ್ತಾಗಿದ್ದಾರೆ. ಏಷ್ಯಾಕಪ್ ಪಂದ್ಯಾವಳಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಜೆಮಿಮಾ ಗಾಯಗೊಂಡಿರುವುದು ತಂಡವನ್ನು ಆತಂಕಕ್ಕೆ ತಳ್ಳಿದೆ. ಪ್ರಸ್ತುತ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಮಹಿಳೆಯರ ದಿ ಹಂಡ್ರೆಂಡ್ ಲೀಗ್​ನಲ್ಲಿ ಜೆಮಿಮಾ ರೊಡ್ರಿಗಸ್ ಸದರ್ನ್ ಬ್ರೇವ್‌ ತಂಡದ ಪರ ಅಮೋಘ ಪ್ರದರ್ಶನ ನೀಡುತ್ತಿದ್ದರು.

2 / 5
ಆದರೆ ಮಂಡಿರಜ್ಜು ಗಾಯದಿಂದಾಗಿ ಜೆಮಿಮಾ ರೊಡ್ರಿಗಸ್ ದಿ ಹಂಡ್ರೆಡ್‌ನಿಂದ ಹೊರಗುಳಿದಿದ್ದಾರೆ. ಜೆಮಿಮಾ ಗಾಯದ ಬಗ್ಗೆ ಸದರ್ನ್ ಬ್ರೇವ್ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಜೆಮಿಮಾ ರೊಡ್ರಿಗಸ್ ಗಾಯದಿಂದಾಗಿ ದಿ ಹಂಡ್ರೆಡ್‌ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಚಾರ್ಲಿ ನಾಟ್ ಅವರನ್ನು ಉಳಿದ ಪಂದ್ಯಗಳಿಗೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಜೇಮೀ, ನೀವು ಬೇಗನೆ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ’ ಎಂದು ಬರೆದುಕೊಂಡಿದೆ.

3 / 5
 25 ವರ್ಷದ ಜೆಮಿಮಾ ರೊಡ್ರಿಗಸ್ ಸದರ್ನ್ ಬ್ರೇವ್‌ ಪರ ಆಡಿದ ಆರು ಇನ್ನಿಂಗ್ಸ್‌ಗಳಲ್ಲಿ 35.75 ಸರಾಸರಿ ಮತ್ತು 131.19 ಸ್ಟ್ರೈಕ್ ರೇಟ್‌ನಲ್ಲಿ 143 ರನ್ ಗಳಿಸಿದ್ದಾರೆ. ಇದರಲ್ಲಿ ಅವರ ಅತ್ಯಧಿಕ ಸ್ಕೋರ್ ಅಜೇಯ 42 ರನ್. ಜೆಮಿಮಾ ಗಾಯಗೊಂಡಿರುವುದು ಸದರ್ನ್ ಬ್ರೇವ್‌ ತಂಡಕ್ಕೆ ಹೆಚ್ಚಿನ ನಷ್ಟವನ್ನುಂಟು ಮಾಡದೆ ಇರಬಹುದು. ಆದರೆ ಭಾರತ ಮಹಿಳಾ ತಂಡಕ್ಕೆ ಇದು ದೊಡ್ಡ ಹೊಡೆತವಾಗಿದೆ.

4 / 5
ಗಾಯಕ್ಕೆ ತುತ್ತಾಗಿರುವ ಜೆಮಿಮಾ ರೊಡ್ರಿಗಸ್ ಆಗಸ್ಟ್ 28 ರಂದು ಪ್ರಾರಂಭವಾಗುವ ಮಹಿಳಾ ಟಿ20 ಏಷ್ಯಾಕಪ್‌ಗೆ ಫಿಟ್ ಆಗುತ್ತಾರೆಯೇ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಭಾರತ ಆಗಸ್ಟ್ 30 ರಂದು ಥೈಲ್ಯಾಂಡ್ ವಿರುದ್ಧ ಪಂದ್ಯಾವಳಿಯ ಮೊದಲ ಪಂದ್ಯವನ್ನು ಆಡಲಿದೆ. ಅಷ್ಟರೊಳಗೆ ಜೆಮಿಮಾ ಗುಣಮುಖರಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ