AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harmanpreet Kaur: ಹರ್ಮನ್ ಸ್ಫೋಟಕ ಬ್ಯಾಟಿಂಗ್: ಮುಂಬೈ-ಗುಜರಾತ್ ನಡುವಣ ಪಂದ್ಯದ ರೋಚಕ ಫೋಟೋ ನೋಡಿ

Gujarat Giants vs Mumbai Indians Women: ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಬೌಲಿಂಗ್​ನಲ್ಲೂ ಬಿರುಗಾಳಿ ಎಬ್ಬಿಸಿತು. ಪರಿಣಾಮ 143 ರನ್​ಗಳ ಬೃಹತ್ ಮೊತ್ತದ ಗೆಲುವು ಸಾಧಿಸಿದೆ.

Vinay Bhat
|

Updated on: Mar 05, 2023 | 8:51 AM

Share
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಮೊದಲ ಪಂದ್ಯವೇ ರೋಚಕತೆಯಿಂದ ಕೂಡಿತ್ತು. ಮುಂಬೈನ ಡಾ. ಡಿವೈ ಪಾಟಿಲ್ ಸ್ಫೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಬೌಲಿಂಗ್​ನಲ್ಲೂ ಬಿರುಗಾಳಿ ಎಬ್ಬಿಸಿತು. ಪರಿಣಾಮ 143 ರನ್​ಗಳ ಬೃಹತ್ ಮೊತ್ತದ ಗೆಲುವು ಸಾಧಿಸಿದೆ.

1 / 8
ಇಡೀ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಟ್ಟಹಾಸ ಮೆರೆಯಿತು. ಬ್ಯಾಟಿಂಗ್​ನಲ್ಲಿ ಓಪನರ್‌ ಹ್ಯಾಲಿ ಮ್ಯಾಥ್ಯೂಸ್‌ ಮತ್ತು ಹರ್ಮನ್‌ಪ್ರೀತ್‌ ಕೌರ್‌ ಅವರ ಬಿರುಸಿನ ಆಟ ಆಕರ್ಷಣೆ ಆಗಿತ್ತು. ಹ್ಯಾಲಿ ಮ್ಯಾಥ್ಯೂಸ್‌ 31 ಎಸೆತಗಳಿಂದ 47 ರನ್‌ ಹೊಡೆದರು. ಇದು 4 ಸಿಕ್ಸರ್‌, 3 ಬೌಂಡರಿಗಳನ್ನು ಒಳಗೊಂಡಿತ್ತು.

2 / 8
ಕೌರ್‌ ಕೇವಲ 30 ಎಸೆತಗಳಿಂದ 65 ರನ್‌ ಚಚ್ಚಿದರು. ಸಿಡಿಸಿದ್ದು 14 ಫೋರ್‌. ಅದರಲ್ಲೂ ಮೋನಿಕಾ ಪಟೇಲ್‌ ಅವರ ಒಂದೇ ಓವರ್‌ನಲ್ಲಿ 5 ಬೌಂಡರಿ ಬಾರಿಸುವ ಮೂಲಕ ಕೌರ್‌ ವಿಶೇಷ ದಾಖಲೆ ಬರೆದರು. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಆಟಗಾರ್ತಿ ಎನಿಸಿಕೊಂಡರು.

3 / 8
ಹರ್ಮನ್​ಪ್ರೀತ್ ಕೌರ್ ಅವರ ಬ್ಯಾಟಿಂಗ್ ವೈಖರಿ.

ಹರ್ಮನ್​ಪ್ರೀತ್ ಕೌರ್ ಅವರ ಬ್ಯಾಟಿಂಗ್ ವೈಖರಿ.

4 / 8
ಅಮೇಲಿಯಾ ಕೆರ್‌ ಕೂಡ ಆಕರ್ಷಕ ಬ್ಯಾಟಿಂಗ್‌ ನಡೆಸಿದರು. ಅವರ 24 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ ಸಿಡಿಸಿ ಅಜೇಯ 45 ರನ್‌ ಚಚ್ಚಿದರು. ಪರಿಣಾಮ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು.

5 / 8
ಇತ್ತ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ ತಂಡ ಮೊದಲ ಓವರ್‌ನಲ್ಲಿಯೇ ನಾಯಕಿ ಮತ್ತು ತಂಡದ ಅತ್ಯುತ್ತಮ ಬ್ಯಾಟರ್ ಬೆತ್ ಮೂನಿ ಎಡ ಮೊಣಕಾಲಿಗೆ ಗಾಯಮಾಡಿಕೊಂಡು ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು. ಗುಜರಾತ್‌ ಸೋಲಿಗೆ ಇದೂ ಒಂದು ಕಾರಣವಾಯಿತು.

6 / 8
ದಯಾಳನ್ ಹೇಮಲತಾ 29 ರನ್​ಗಳ ಕೊಡುಗೆ ಹೊರತುಪಡಿಸಿ ಗುಜರಾತ್‌ನ ಯಾವ ಆಟಗಾರ್ತಿಯರೂ ಗಮನಾರ್ಹ ಪ್ರದರ್ಶನ ನೀಡಲಿಲ್ಲ. ನಾಲ್ಕು ಬ್ಯಾಟರ್​ಗಳು ಸೊನ್ನೆ ಸುತ್ತಿದರು. ಗುಜರಾತ್ ತಂಡ 64 ರನ್‌ಗಳಿಗೆ ಆಲೌಟ್ ಆಗಿ ಮುಂಬೈಗೆ ಶರಣಾಯಿತು. ಮುಂಬೈ ಪರ ಸೈಕಾ ಇಶಾಕ್ಯೂ 4 ವಿಕೆಟ್ ಕಿತ್ತು ಮಿಂಚಿದರು.

7 / 8
ಇಂದು ಟೂರ್ನಿಯ ಮೊದಲ ಡಬಲ್ ಹೆಡರ್ ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೆಗ್ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವನ್ನು ಎದುರಿಸಲಿದೆ. 7:30ಕ್ಕೆ ಶುರುವಾಗಲಿರುವ ದ್ವಿತೀಯ ಪಂದ್ಯ ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ಆಯೋಜಿಸಲಾಗಿದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ