- Kannada News Photo gallery Cricket photos Women’s T20 World Cup 2024 4 teams confirmed Semi-finals Venues, schedule details in kannada
ವಿಂಡೀಸ್ ವಿರುದ್ಧ ಸೋತು ವಿಶ್ವಕಪ್‌ನಿಂದ ಹೊರಬಿದ್ದ ಇಂಗ್ಲೆಂಡ್; ಸೆಮೀಸ್ಗೇರಿದ 4 ತಂಡಗಳು
Women’s T20 World Cup 2024: ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ನ ಲೀಗ್ ಹಂತ ಮುಕ್ತಾಯವಾಗಿದೆ. ಇದೀಗ ಸೆಮಿಫೈನಲ್ ಸುತ್ತು ಆರಂಭವಾಗಲಿದ್ದು, ಈ ಸುತ್ತಿಗೆ ಎ ಗುಂಪಿನಿಂದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.
Updated on: Oct 16, 2024 | 6:32 PM

ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ನ ಲೀಗ್ ಹಂತ ಮುಕ್ತಾಯವಾಗಿದೆ. ನಿನ್ನೆ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ 6 ವಿಕೆಟ್ಗಳಿಂದ ಸೋತ ಇಂಗ್ಲೆಂಡ್ ವನಿತಾ ಪಡೆ ಲೀಗ್ ಹಂತದಲೇ ತನ್ನ ಪ್ರಯಾಣ ಮುಗಿಸಿತು. ಇದರೊಂದಿಗೆ ಸೆಮಿ ಪೈನಲ್ಗೆ ಟಿಕೆಟ್ ಪಡೆದುಕೊಂಡ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ.

ಅದರಂತೆ ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

ಇನ್ನು ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ಆಸ್ಟ್ರೇಲಿಯಾ ತಂಡ, ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಸೆಮಿಫೈನಲ್ನಲ್ಲಿ ಎದುರಿಸಲಿದೆ. ಅದರಂತೆ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ.

ಹಾಗೆಯೇ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ವೆಸ್ಟ್ ಇಂಡೀಸ್ ತಂಡ, ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 18 ರಂದು ಸಂಜೆ 6 ಗಂಟೆಗೆ ಆರಂಭವಾಗಲಿದೆ.

ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆದ್ದ ತಂಡಗಳು ಅಕ್ಟೋಬರ್ 20 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಈ ಪಂದ್ಯವೂ ಸಹ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಸೆಮೀಸ್ಗೆ ಆಯ್ಕೆಯಾಗಿರುವ 4 ತಂಡಗಳೂ ಬಲಿಷ್ಠವಾಗಿರುವುದರಿಂದ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ.
