ಮಹಿಳಾ ಟಿ20 ವಿಶ್ವಕಪ್​ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

Updated on: Jun 29, 2026 | 8:02 AM

 ICC Women's T20 World Cup 2026: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಹತ್ತು ತಂಡಗಳೊಂದಿಗೆ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು ನಾಲ್ಕು ಟೀಮ್​ಗಳು ಮಾತ್ರ, ಇನ್ನುಳಿದ ಭಾರತ, ಪಾಕಿಸ್ತಾನ್, ಐರ್ಲೆಂಡ್, ನ್ಯೂಝಿಲೆಂಡ್, ಶ್ರೀಲಂಕಾ ಮತ್ತು ಸ್ಕಾಟ್‌ಲ್ಯಾಂಡ್ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

1 / 5
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. 10 ತಂಡಗಳ ಈ ಕದನದಿಂದ ಈಗಾಗಲೇ 6 ತಂಡಗಳು ಹೊರಬಿದ್ದಿವೆ. ಇನ್ನುಳಿದಿರುವುದು ಕೇವಲ 4 ತಂಡಗಳು ಮಾತ್ರ. ಈ ನಾಲ್ಕು ತಂಡಗಳ ನಡುವೆ ನಾಕೌಟ್ ಹಂತದ ಪಂದ್ಯಗಳು ನಡೆಯಲಿವೆ. (PC: ICC)

2 / 5
ಗ್ರೂಪ್ ಹಂತದಲ್ಲಿ ಸತತ ಗೆಲುವುಗಳೊಂದಿಗೆ ಅಜೇಯರಾಗಿ ಉಳಿದ ಆಸ್ಟ್ರೇಲಿಯಾ ಮತ್ತು ಆತಿಥೇಯ ಇಂಗ್ಲೆಂಡ್ ತಮ್ಮ ಗ್ರೂಪ್‌ಗಳಲ್ಲಿ ಅಗ್ರಸ್ಥಾನ ಪಡೆದಿವೆ. ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡಗಳು ಕ್ರಮವಾಗಿ ಎರಡನೇ ಸ್ಥಾನ ಪಡೆದು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ. ಅದರಂತೆ ಈ ತಂಡಗಳ ನಡುವಣ ಸೆಮಿಫೈನಲ್ ಪಂದ್ಯದ ವೇಳಾಪಟ್ಟಿ ಈ ಕೆಳಗಿನಂತಿದೆ... (PC: ICC)

3 / 5
ಮೊದಲ ಸೆಮಿಫೈನಲ್: ಜೂನ್ 30, ಮಂಗಳವಾರ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಲಂಡನ್​ನ ದಿ ಓವಲ್ ಮೈದಾನ ಆತಿಥ್ಯವಹಿಸಲಿದೆ. (PC: ICC)

4 / 5
ಎರಡನೇ ಸೆಮಿಫೈನಲ್: ಜುಲೈ 2, ಗುರುವಾರ ನಡೆಯಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಕೂಡ ಲಂಡನ್​ನ ದಿ ಓವಲ್ ಮೈದಾನದಲ್ಲೇ ನಡೆಯಲಿದೆ. (PC: ICC)

5 / 5
ಫೈನಲ್ ಪಂದ್ಯ ಯಾವಾಗ? ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಜುಲೈ 5, ಭಾನುವಾರದಂದು ಲಂಡನ್‌ನ ಪ್ರಸಿದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಮಹಾ ಫೈನಲ್ ಪಂದ್ಯದಲ್ಲಿ ವಿಶ್ವಕಪ್ ಪ್ರಶಸ್ತಿಗಾಗಿ ಸೆಣಸಾಡಲಿವೆ. (PC: ICC)

Follow Us