AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs SA: ವಿಶ್ವಕಪ್‌ ಇತಿಹಾಸದಲ್ಲಿ ಅತಿದೊಡ್ಡ ಸೋಲುಂಡ ಆಸ್ಟ್ರೇಲಿಯಾ!

Australia vs South Africa, World Cup 2023: ದಕ್ಷಿಣ ಆಫ್ರಿಕಾ ವಿರುದ್ಧ 134 ರನ್‌ಗಳ ಸೋಲಿನೊಂದಿಗೆ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್‌ನ ಅತಿದೊಡ್ಡ ಸೋಲನ್ನು ಅನುಭವಿಸಿತು. ಈ ಮೊದಲು ಭಾರತದ ವಿರುದ್ಧ ಆರು ವಿಕೆಟ್‌ಗಳ ಸೋಲಿನ ನಂತರ ಕಾಂಗರೂಗಳ ಸತತ ಎರಡನೇ ಸೋಲು ಇದಾಗಿದೆ. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ಹಲವು ಅವಮಾನಕರ ದಾಖಲೆಗಳನ್ನು ಬರೆದಿದೆ.

ಪೃಥ್ವಿಶಂಕರ
|

Updated on: Oct 13, 2023 | 6:11 AM

Share
ಈ ಬಾರಿಯ ವಿಶ್ವಕಪ್ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಕ್ಕೆ ದುಃಸ್ವಪ್ನವಾಗಿ ಪರಿಣಮಿಸುತ್ತಿದೆ. ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಮುಜುಗರದ ಸೋಲನ್ನು ಎದುರಿಸಿದೆ.

1 / 7
ಗುರುವಾರ ಲಕ್ನೋದ ಎಕಾನಾ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ 134 ರನ್‌ಗಳ ಬೃಹತ್ ಅಂತರದ ಸೋಲನುಭವಿಸಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ ತನ್ನ ಎರಡನೇ ಪಂದ್ಯವನ್ನು ಗೆದ್ದುಕೊಂಡರೆ, ಆಸ್ಟ್ರೇಲಿಯಾ ತನ್ನ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು.

2 / 7
ದಕ್ಷಿಣ ಆಫ್ರಿಕಾ ವಿರುದ್ಧ 134 ರನ್‌ಗಳ ಸೋಲಿನೊಂದಿಗೆ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್‌ನ ಅತಿದೊಡ್ಡ ಸೋಲನ್ನು ಅನುಭವಿಸಿತು. ಈ ಮೊದಲು ಭಾರತದ ವಿರುದ್ಧ ಆರು ವಿಕೆಟ್‌ಗಳ ಸೋಲಿನ ನಂತರ ಕಾಂಗರೂಗಳ ಸತತ ಎರಡನೇ ಸೋಲು ಇದಾಗಿದೆ. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ಹಲವು ಅವಮಾನಕರ ದಾಖಲೆಗಳನ್ನು ಬರೆದಿದೆ.

3 / 7
ಇದಕ್ಕೂ ಮೊದಲು 1983ರ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಚೆಲ್ಮ್ಸ್‌ಫೋರ್ಡ್‌ನಲ್ಲಿ ನಡೆದ ಪಂದ್ಯದಲ್ಲಿ 118 ರನ್‌ಗಳಿಂದ ಸೋತಿದ್ದು ಆಸ್ಟ್ರೇಲಿಯಾದ ಹಿಂದಿನ ದೊಡ್ಡ ಸೋಲಾಗಿತ್ತು. 1983ರ ವಿಶ್ವಕಪ್‌ನಲ್ಲಿಯೇ ಮತ್ತೊಂದು ಬಾರಿ ಆಸ್ಟ್ರೇಲಿಯಾ 100ಕ್ಕೂ ಹೆಚ್ಚು ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಲೀಡ್ಸ್‌ನಲ್ಲಿ ವೆಸ್ಟ್ ಇಂಡೀಸ್ 101 ರನ್‌ಗಳಿಂದ ಕಾಂಗರೂಗಳನ್ನು ಸೋಲಿಸಿತ್ತು.

4 / 7
1992ರ ನಂತರ ಆಸ್ಟ್ರೇಲಿಯಾ ತನ್ನ ಮೊದಲ ಎರಡು ವಿಶ್ವಕಪ್ ಪಂದ್ಯಗಳಲ್ಲಿ ಸೋತಿರುವುದು ಇದೇ ಮೊದಲು. ಇದಲ್ಲದೆ, ಮೊದಲ ಬಾರಿಗೆ ಆಸ್ಟ್ರೇಲಿಯಾ ವಿಶ್ವಕಪ್‌ನಲ್ಲಿ ಸತತ 4 ಪಂದ್ಯಗಳಲ್ಲಿ ಸೋತಿದೆ. ಇಂಗ್ಲೆಂಡ್ ವಿರುದ್ಧ 2019 ರ ವಿಶ್ವಕಪ್ ಸೆಮಿಫೈನಲ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಗುಂಪು-ಹಂತದ ಪಂದ್ಯದಲ್ಲಿ ಸೋತ ನಂತರ ಇದು ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಸತತ ನಾಲ್ಕನೇ ಸೋಲಾಗಿದೆ.

5 / 7
ಆದಾಗ್ಯೂ, ಆಸ್ಟ್ರೇಲಿಯಾವು 96 ಪಂದ್ಯಗಳಿಂದ ಐದು ಪ್ರಶಸ್ತಿಗಳು ಮತ್ತು 69 ಗೆಲುವುಗಳೊಂದಿಗೆ ಪಂದ್ಯಾವಳಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿ ಉಳಿದಿದೆ.

6 / 7
ಪಂದ್ಯದ ಕುರಿತು ಮಾತನಾಡಿರುವ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಕ್ವಿಂಟನ್ ಡಿ ಕಾಕ್ (109) ಅವರ ಅದ್ಭುತ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 311 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ತಂಡವು ಸತತವಾಗಿ ವಿಕೆಟ್ ಕಳೆದುಕೊಂಡು ಕೇವಲ 40.5 ಓವರ್‌ಗಳಲ್ಲಿ 177 ರನ್‌ ಕಲೆ ಹಾಕಿ ತನ್ನ ಇನ್ನಿಂಗ್ಸ್ ಮುಗಿಸಿತು.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?