World Cup 2023: ‘ವೇಳಾಪಟ್ಟಿ ಬದಲಾವಣೆ ಇಲ್ಲ’; ಪಾಕ್ ಮನವಿ ತಿರಸ್ಕರಿಸಿದ ಐಸಿಸಿ- ಬಿಸಿಸಿಐ..!

World Cup 2023: ಆದರೆ ಪಾಕ್ ವಾದವನ್ನು ನಯವಾಗಿ ತಿರಸ್ಕರಿಸಿರುವ ಐಸಿಸಿ ಪಂದ್ಯದ ಸ್ಥಳವನ್ನು ಬದಲಾಯಿಸುವುದಿಲ್ಲ ಎಂದು ಪಿಸಿಬಿಗೆ ಸಂದೇಶದ ಮೂಲಕ ತಿಳಿಸಿವೆ.

ಪೃಥ್ವಿಶಂಕರ
|

Updated on: Jun 22, 2023 | 8:00 AM

2011 ರ ನಂತರ, ಅಂದರೆ ಬರೋಬ್ಬರಿ 12 ವರ್ಷಗಳ ನಂತರ ಏಕದಿನ ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲಾಗುತ್ತದೆ. ಈ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಈ ಟೂರ್ನಿಗಾಗಿ ಬಿಸಿಸಿಐ ಕೂಡ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿಶ್ವಕಪ್ ವೇಳಾಪಟ್ಟಿ ಬದಲಾವಣೆ ಮಾಡಬೇಕು ಎಂಬ ಮನವಿಯನ್ನು ಐಸಿಸಿ ಮುಂದಿಟ್ಟಿದೆ.

1 / 7
ಆದರೆ ಇದೀಗ ಐಸಿಸಿ ಮತ್ತು ಬಿಸಿಸಿಐ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿದೆ. ವಾಸ್ತವವಾಗಿ ವಿಶ್ವಕಪ್‌ನಲ್ಲಿ 2 ಪಂದ್ಯಗಳ ಸ್ಥಳವನ್ನು ಬದಲಾಯಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಐಸಿಸಿ ಈ ಮನವಿಯನ್ನು ತಿರಸ್ಕರಿಸಿದೆ. ಕ್ರಿಕ್‌ಬಜ್ ವರದಿಯ ಪ್ರಕಾರ, ಮಂಗಳವಾರ ನಡೆದ ಸಭೆಯ ನಂತರ ಬಿಸಿಸಿಐ ಮತ್ತು ಐಸಿಸಿ ಈ ನಿರ್ಧಾರವನ್ನು ತೆಗೆದುಕೊಂಡಿವೆ. ಈ ಬಗ್ಗೆ ಪಿಸಿಬಿಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.

2 / 7
ವರದಿಗಳ ಪ್ರಕಾರ, ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳ ಸ್ಥಳವನ್ನು ಬದಲಾಯಿಸಲು ಪಿಸಿಬಿ ಮನವಿ ಮಾಡಿತ್ತು. ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ಚೆನ್ನೈನಲ್ಲಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಎರಡೂ ಪಂದ್ಯಗಳು ನಡೆಯುವ ಸ್ಥಳಗಳು ನಮ್ಮ ತಂಡಕ್ಕೆ ಕಂಟಕವಾಗಿವೆ ಎಂಬುದು ಪಾಕ್ ವಾದವಾಗಿತ್ತು.

3 / 7
ಆದರೆ ಪಾಕ್ ವಾದವನ್ನು ನಯವಾಗಿ ತಿರಸ್ಕರಿಸಿರುವ ಐಸಿಸಿ ಪಂದ್ಯದ ಸ್ಥಳವನ್ನು ಬದಲಾಯಿಸುವುದಿಲ್ಲ ಎಂದು ಪಿಸಿಬಿಗೆ ಸಂದೇಶದ ಮೂಲಕ ತಿಳಿಸಿವೆ. ಪಂದ್ಯದ ಸ್ಥಳವನ್ನು ಬದಲಾಯಿಸಲು ಯಾವುದೇ ಘನ ಕಾರಣವಿಲ್ಲ. ಐಸಿಸಿ ಪಂದ್ಯಾವಳಿಗಳಲ್ಲಿ, ಭದ್ರತಾ ಕಾರಣಗಳಿಗಾಗಿ ಪಂದ್ಯದ ಸ್ಥಳವನ್ನು ಬದಲಾಯಿಸಬಹುದು. ಆದರೆ, ಪಿಸಿಬಿ ಮಾಡಿದ ಮನವಿಯಲ್ಲಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಲಾಗಿಲ್ಲ ಎಂದು ಐಸಿಸಿ ತನ್ನ ಸ್ಪಷ್ಟನೆಯಲ್ಲಿ ತಿಳಿಸಿದೆ.

4 / 7
ಈ ಹಿಂದೆ ಭದ್ರತಾ ದೃಷ್ಟಿಯಿಂದಾಗಿ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯವನ್ನು ಧರ್ಮಶಾಲಾ ಬದಲಿಗೆ ಕೋಲ್ಕತ್ತಾದಲ್ಲಿ ನಡೆಸಲಾಗಿತ್ತು. ಆದರೆ ಚೆನ್ನೈ ಮತ್ತು ಬೆಂಗಳೂರು ಪಾಕಿಸ್ತಾನಕ್ಕೆ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ. ಹೀಗಾಗಿ ಪಂದ್ಯ ನಡೆಯುವ ಸ್ಥಳಗಳಲ್ಲಿ ಬದಲಾವಣೆ ಇಲ್ಲ ಎಂದು ಐಸಿಸಿ ಹೇಳಿದೆ. ಇದರೊಂದಿಗೆ ಅಹಮದಾಬಾದ್‌ನಲ್ಲಿ ಟೀಂ ಇಂಡಿಯಾ ಎದುರು ಆಡುವ ಬಗ್ಗೆ ಪಿಸಿಬಿ ಮಾಜಿ ಅಧ್ಯಕ್ಷ ನಜೀಮ್ ಸೇಥಿ ಕಳವಳ ವ್ಯಕ್ತಪಡಿಸಿದ್ದರು. ಆದರೆ ಅದನ್ನೂ ಪರಿಗಣಿಸಿಲ್ಲ.

5 / 7
ಏತನ್ಮಧ್ಯೆ, ಮುಂಬರುವ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಲಾಗಿಲ್ಲ. ಕರಡು ವೇಳಾಪಟ್ಟಿಯಂತೆ ಪಂದ್ಯದ ಸ್ಥಳವನ್ನು ಬದಲಾಯಿಸಲು ಪಾಕಿಸ್ತಾನ ಒತ್ತಾಯಿಸಿದೆ. ಕ್ರಿಕ್‌ಬಜ್ ವರದಿಯ ಪ್ರಕಾರ, ಮುಂಬರುವ ವಾರಗಳಲ್ಲಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಗಳಿವೆ.

6 / 7
ಏಕದಿನ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಏಷ್ಯಾಕಪ್ ಮತ್ತು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ವಿಂಡೀಸ್ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿದೆ.

7 / 7
Follow us
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​