World Cup 2023: ಏಕದಿನ ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ್ ಫೈನಲ್ ಆಡಲಿದೆ: ಮಿಸ್ಬಾ
TV9 Web | Updated By: ಝಾಹಿರ್ ಯೂಸುಫ್
Updated on:
Jun 14, 2023 | 9:23 PM
World Cup 2023: ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ.
1 / 7
World Cup 2023: ಏಕದಿನ ವಿಶ್ವಕಪ್ ಕಾವೇರುತ್ತಿದೆ. ಟೂರ್ನಿ ಆರಂಭಕ್ಕೆ ಇನ್ನೂ 4 ತಿಂಗಳುಗಳು ಬಾಕಿಯಿದ್ದರೂ, ಈಗಾಗಲೇ ವಿಶ್ವಕಪ್ ಕುರಿತಾದ ಚರ್ಚೆಗಳು ಶುರುವಾಗಿದೆ. ಅಲ್ಲದೆ ಇತ್ತ ವಿಶ್ವಕಪ್ ಆಯೋಜಿಸಲಿರುವ ಬಿಸಿಸಿಐ ಟೂರ್ನಿಗೆ ಬೇಕಾದ ಸಿದ್ಧತೆಗಳನ್ನು ಕೂಡ ಶುರು ಮಾಡಿಕೊಂಡಿದೆ.
2 / 7
ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಕರಡು ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.
3 / 7
ಇದಲ್ಲದೆ ಈ ಬಾರಿಯ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಭವಿಷ್ಯ ನುಡಿದಿದ್ದಾರೆ.
4 / 7
ಖಾಸಗಿ ಚಾನೆಲ್ವೊಂದರಲ್ಲಿ ಮಾತನಾಡಿದ ಮಿಸ್ಬಾ-ಉಲ್-ಹಕ್, ಈ ಬಾರಿಯ ವಿಶ್ವಕಪ್ ಫೈನಲ್ನಲ್ಲಿ ಭಾರತ-ಪಾಕಿಸ್ತಾನ್ ಆಡಲಿದೆ. ಅಲ್ಲದೆ ಈ ವರ್ಷ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಪಾಕಿಸ್ತಾನದ ಮುಂದಿದೆ.
5 / 7
1992 ರ ಬಳಿಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಗೆದ್ದಿಲ್ಲ. ನನ್ನ ಪ್ರಕಾರ ಈ ಸಲ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ನಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ್ ತಂಡಗಳು ಫೈನಲ್ನಲ್ಲಿ ಸೆಣಸಲಿದೆ. ಅಲ್ಲದೆ ಭಾರತವನ್ನು ಸೋಲಿಸಿ ಪಾಕಿಸ್ತಾನ್ ವಿಶ್ವ ಚಾಂಪಿಯನ್ ಕಿರೀಟ ಧರಿಸಲಿದೆ ಎಂದು ಮಿಸ್ಬಾ ಹೇಳಿದ್ದಾರೆ.
6 / 7
ಒಟ್ಟಿನಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ನಾಯಕ ನೀಡಿರುವ ಹೇಳಿಕೆಯು ಇದೀಗ ಭಾರೀ ವೈರಲ್ ಆಗಿದೆ. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಏಕದಿನ ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ್ ಒಟ್ಟು 7 ಬಾರಿ ಮುಖಾಮುಖಿಯಾಗಿದೆ. ಇಲ್ಲಿ ಏಳು ಸಲ ಕೂಡ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಬಗ್ಗು ಬಡಿದಿದೆ.
7 / 7
ಪ್ರಸ್ತುತ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಇನ್ನು ನವೆಂಬರ್ 19 ರಂದು ಅಹಮದಾಬಾದ್ ಸ್ಟೇಡಿಯಂನಲ್ಲೇ ಫೈನಲ್ ಪಂದ್ಯವನ್ನು ಆಯೋಜಿಸಲಿದೆ.