World Cup 2023: ವಿಶ್ವಕಪ್​ನಲ್ಲಿ ಪಾಕ್ ತಂಡ ಭಾಗವಹಿಸುವ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಪಾಕ್ ಸರ್ಕಾರ

World Cup 2023: ಪಾಕ್ ತಂಡ ವಿಶ್ವಕಪ್​ಗಾಗಿ ಭಾರತಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮುಮ್ತಾಜ್ ಬಲೂಚ್, ಭಾರತದಲ್ಲಿ ಪಾಕಿಸ್ತಾನ ತಂಡದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದಾರೆ.

ಪೃಥ್ವಿಶಂಕರ
|

Updated on:Jun 23, 2023 | 2:53 PM

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕ್ ತಂಡ ಭಾಗವಹಿಸುವ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಖಚಿತತೆ ಸಿಕ್ಕಿಲ್ಲ. ಏಷ್ಯಾಕಪ್ ಆಡಲು ಭಾರತ ಪಾಕ್ ನೆಲಕ್ಕೆ ಬರದಿದ್ದರೆ, ಪಾಕ್ ತಂಡ ಕೂಡ ಭಾರತಕ್ಕೆ ವಿಶ್ವಕಪ್ ಆಡಲು ಹೋಗುವುದಿಲ್ಲ ಎಂದು ಈ ಹಿಂದೆಯೇ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷರು ತಿಳಿಸಿದ್ದರು.

1 / 7
ಆಗಿನಿಂದಲೂ ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳ ಹಗ್ಗಜಗ್ಗಾಟ ಪ್ರತಿ ದಿನ ಒಂದೊಂದು ರೂಪ ಪಡೆದುಕೊಳ್ಳುತ್ತಿದೆ. ಅಂತಿಮವಾಗಿ ವಿಶ್ವಕಪ್ ಆಡುವ ಬಗ್ಗೆ ಒಲವು ತೋರಿದ್ದ ಪಾಕ್ ಕ್ರಿಕೆಟ್ ಮೊದಲು ಅಹಮದಾಬಾದ್​ನಲ್ಲಿ ಪಂದ್ಯವನ್ನಾಡುವುದಿಲ್ಲ ಎಂದಿತ್ತು.

2 / 7
ಆನಂತರ ತನ್ನ ನಿಲುವು ಬದಲಿಸಿದ್ದ ಪಾಕ್, ವಿಶ್ವಕಪ್ ವೇಳಾಪಟ್ಟಿಯಲ್ಲಿ 2 ಪಂದ್ಯಗಳ ಸ್ಥಳಗಳನ್ನು ಬದಲಿಸಬೇಕು ಎಂದಿತ್ತು. ಆದರೆ ಪಾಕ್ ಮನವಿಗೆ ಬಿಸಿಸಿಐ ಹಾಗೂ ಐಸಿಸಿ ಸೊಪ್ಪು ಹಾಕಲಿಲ್ಲ. ಹೀಗಾಗಿ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗುವುದು ತಡವಾಗುತ್ತಿದೆ. ಇಷ್ಷು ದಿನ ಪಾಕ್ ತಂಡ ವಿಶ್ವಕಪ್​ನಲ್ಲಿ ಆಡುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಮಾತ್ರ ಪ್ರತಿಕ್ರಿಯೆ ನೀಡುತ್ತಿತ್ತು. ಇದೀಗ ಪಾಕ್ ಸರ್ಕಾರ ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಮಾತನಾಡಿದೆ.

3 / 7
ಪಾಕ್ ತಂಡ ವಿಶ್ವಕಪ್​ಗಾಗಿ ಭಾರತಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮುಮ್ತಾಜ್ ಬಲೂಚ್, ಭಾರತದಲ್ಲಿ ಪಾಕಿಸ್ತಾನ ತಂಡದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದಾರೆ.

4 / 7
ಅಲ್ಲದೆ ಮುಂಬರುವ ದಿನಗಳಲ್ಲಿ ನಾವು ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಭಾರತದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿ, ಸರ್ಕಾರವು ತನ್ನ ನಿರ್ಧಾರವನ್ನು ಶೀಘ್ರದಲ್ಲೇ ಪಿಸಿಬಿಗೆ ತಿಳಿಸಲಿದೆ ಎಂದರು. ಇದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ನಿರ್ಧರಿಸಿರುವುದು ಬೇಸರ ತಂದಿದೆ ಎಂದು ಅವರು ಹೇಳಿದ್ದಾರೆ.

5 / 7
ಕ್ರೀಡೆಯೊಂದಿಗೆ ರಾಜಕೀಯವನ್ನು ಬೆರೆಸಬಾರದು. ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡದಿರುವ ಭಾರತದ ನೀತಿ ನಿರಾಶಾದಾಯಕವಾಗಿದೆ. ನಾವು ಭದ್ರತಾ ಪರಿಸ್ಥಿತಿ ಸೇರಿದಂತೆ ವಿಶ್ವಕಪ್‌ನಲ್ಲಿ ನಮ್ಮ ಭಾಗವಹಿಸುವಿಕೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಗಮನಿಸುತ್ತಿದ್ದೇವೆ ಮತ್ತು ಮೌಲ್ಯಮಾಪನ ಮಾಡುತ್ತಿದ್ದೇವೆ. ಕ್ರಿಕೆಟಿಗರು ಮತ್ತು ನಾವು ಸರಿಯಾದ ಸಮಯದಲ್ಲಿ ಪಿಸಿಬಿಗೆ ನಮ್ಮ ಅಭಿಪ್ರಾಯಗಳನ್ನು ನೀಡುತ್ತೇವೆ ಎಂದು ವಕ್ತಾರರು ಹೇಳಿದರು.

6 / 7
ಭಾರತ ಮತ್ತು ಪಾಕಿಸ್ತಾನ ನಡುವೆ 2012-13ರಲ್ಲಿ ಕೊನೆಯ ದ್ವಿಪಕ್ಷೀಯ ಸರಣಿ ನಡೆದಿತ್ತು. ಅಂದಿನಿಂದ ಎರಡೂ ದೇಶಗಳು ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.

7 / 7

Published On - 2:51 pm, Fri, 23 June 23

Follow us
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್