AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

136 ರನ್, 1 ವಿಕೆಟ್, 2 ಕ್ಯಾಚ್, ಮೆಕ್‌ಮುಲ್ಲೆನ್ ಅಬ್ಬರ..! ಸೂಪರ್​ ಸಿಕ್ಸ್​ಗೆ ಸ್ಕಾಟ್ಲೆಂಡ್ ಎಂಟ್ರಿ

World Cup Qualifiers: ಸ್ಕಾಟ್ಲೆಂಡ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮೆಕ್‌ಮುಲ್ಲೆನ್ 121 ಎಸೆತಗಳಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 136 ರನ್ ಚಚ್ಚಿದರು.

ಪೃಥ್ವಿಶಂಕರ
|

Updated on: Jun 26, 2023 | 11:53 AM

Share
ಭಾನುವಾರ ನಡೆದ ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ಸ್ ಪಂದ್ಯದಲ್ಲಿ ಒಮಾನ್ ತಂಡವನ್ನು 76 ರನ್‌ಗಳಿಂದ ಮಣಿಸಿದ ಸ್ಕಾಟ್ಲೆಂಡ್ ತಂಡ ವಿಶ್ವಕಪ್ ಕ್ವಾಲಿಫೈಯರ್ಸ್ ಸೂಪರ್ ಸಿಕ್ಸ್ ಹಂತಕ್ಕೆ ಎಂಟ್ರಿಕೊಟ್ಟಿದೆ. ಇತ್ತ ಸ್ಕಾಟ್ಲೆಂಡ್ ವಿರುದ್ಧ ಸೋಲುಂಡ ಒಮನ್ ಕೂಡ ಸೂಪರ್ ಸಿಕ್ಸ್​ಗೆ ಟಿಕೆಟ್ ಖಚಿತ ಪಡಿಸಿಕೊಂಡಿದೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ಮೆಕ್‌ಮುಲ್ಲೆನ್ ಅವರ ಬಿರುಸಿನ ಶತಕದ ಆಧಾರದ ಮೇಲೆ 50 ಓವರ್‌ಗಳಲ್ಲಿ 320 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಒಮನ್ ತಂಡ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 244 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 5
ಸ್ಕಾಟ್ಲೆಂಡ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮೆಕ್‌ಮುಲ್ಲೆನ್ 121 ಎಸೆತಗಳಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 136 ರನ್ ಚಚ್ಚಿದರು. ಒಮನ್ ಪರ ಬಿಲಾಲ್ ಖಾನ್ 5 ವಿಕೆಟ್ ಪಡೆದರು. ಇನ್ನು 321 ರನ್‌ಗಳ ಗುರಿ ಬೆನ್ನಟ್ಟಿದ ಒಮನ್‌ ಪರ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ನಸೀಮ್ ಖುಷಿ ಗರಿಷ್ಠ 69 ರನ್ ಗಳಿಸಿದರು.

3 / 5
ಇನ್ನು ಬ್ಯಾಟಿಂಗ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದ ಮೆಕ್‌ಮುಲ್ಲೆನ್ ಬೌಲಿಂಗ್​ನಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಒಮನ್‌ ತಂಡದ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ ಅವರ ವಿಕೆಟ್ ಪಡೆದ ಮೆಕ್‌ಮುಲ್ಲೆನ್, ಇದಾದ ನಂತರ ಅಯಾನ್ ಖಾನ್ ಮತ್ತು ಶೋಯೆಬ್ ಖಾನ್ ಅವರ ಅದ್ಭುತ ಕ್ಯಾಚ್ ತೆಗೆದುಕೊಂಡರು.

4 / 5
ಕಳೆದ ವರ್ಷಾಂತ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ 24ರ ಹರೆಯದ ಮೆಕ್‌ಮುಲ್ಲೆನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟು 7 ತಿಂಗಳಾಗಿದೆ. ಮೆಕ್‌ಮುಲ್ಲೆನ್ ಸ್ಕಾಟ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಕ್ರೀಡೆ ಮತ್ತು ಮನೋವಿಜ್ಞಾನವನ್ನು ಅಧ್ಯಯನ ಮಾಡಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?

ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ

ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!

ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!

ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್

ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ

ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ

ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ

ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ

ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು