AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4,4,4,4,4,4,4: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

WPL 2023: ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಗುಜರಾತ್ ಜೈಂಟ್ಸ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಅದರಲ್ಲೂ ಒಟ್ಟು 14 ಫೋರ್​ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು.

TV9 Web
| Edited By: |

Updated on: Mar 04, 2023 | 11:08 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ 7 ಫೋರ್​ಗಳನ್ನು ಬಾರಿಸುವ ಮೂಲಕ ಎಂಬುದೇ ವಿಶೇಷ.

1 / 7
ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಗುಜರಾತ್ ಜೈಂಟ್ಸ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಅದರಲ್ಲೂ ಒಟ್ಟು 14 ಫೋರ್​ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು.

2 / 7
ಈ ಸಿಡಿಲಬ್ಬರದ ನಡುವೆ ಹರ್ಮನ್​ಪ್ರೀತ್ ಕೌರ್ ಬ್ಯಾಟ್​ನಿಂದ ಸತತವಾಗಿ 7 ಬೌಂಡರಿಗಳು ಮೂಡಿಬಂದಿರುವುದು ವಿಶೇಷ. ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ಫೋರ್​ಗಳ ಸುರಿಮಳೆ ಪ್ರಾರಂಭವಾಯಿತು.

3 / 7
23 ವರ್ಷದ ಎಡಗೈ ವೇಗದ ಬೌಲರ್ ಮೋನಿಕಾ ಪಟೇಲ್ ಅವರನ್ನು ಗುರಿಯಾಗಿಸಿದ ಹರ್ಮನ್​ಪ್ರೀತ್ ಕೌರ್ ಕೊನೆಯ 4 ಎಸೆತಗಳಲ್ಲಿ ಸತತ ಬೌಂಡರಿಗಳನ್ನು ಬಾರಿಸಿದರು. ಇದಾದ ನಂತರ ಗುಜರಾತ್ ತಂಡದ ನಾಯಕಿ ಬೆತ್ ಮೂನಿ ಅವರು ಆಶ್ ಗಾರ್ಡ್ನರ್​ಗೆ ಚೆಂಡನ್ನು ನೀಡಿದರು.

4 / 7
ಆದರೆ, ಅನುಭವಿ ಆಟಗಾರ್ತಿ ಗಾರ್ಡ್ನರ್​ರನ್ನು ಕೂಡ ಲೀಲಾಜಾಲವಾಗಿ ಎದುರಿಸಿದ ಹರ್ಮನ್​ಪ್ರೀತ್ ಕೌರ್ ಹ್ಯಾಟ್ರಿಕ್ ಬೌಂಡರಿ ಬಾರಿಸಿದರು.​ ಓವರ್‌ನ ಮೊದಲ ಎಸೆತದಲ್ಲಿ, ಅಮೆಲಿಯಾ ಕೆರ್ ಸಿಂಗಲ್ ತೆಗೆದರೆ, ಆ ಬಳಿಕ ಸ್ಟ್ರೈಕ್​ಗೆ ಬಂದ ಹರ್ಮನ್​ ಬ್ಯಾಕ್ ಟು ಬ್ಯಾಕ್ 3 ಬೌಂಡರಿ ಬಾರಿಸಿದರು. ಇದರೊಂದಿಗೆ ಎದುರಿಸಿದ 7 ಎಸೆತಗಳಲ್ಲಿ ಸತತವಾಗಿ 7 ಬೌಂಡರಿಗಳನ್ನು ಬಾರಿಸಿದ ವಿಶೇಷ ದಾಖಲೆಯೊಂದು ಹರ್ಮನ್​ಪ್ರೀತ್ ಕೌರ್ ಪಾಲಾಯಿತು.

5 / 7
ಅಷ್ಟೇ ಅಲ್ಲದೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಆಟಗಾರ್ತಿ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸ್ಮೃತಿ ಮಂಧಾನ (23 ಎಸೆತ) ಹೆಸರಿನಲ್ಲಿತ್ತು.

6 / 7
ಇನ್ನು ಈ ಪಂದ್ಯದಲ್ಲಿ 30 ಎಸೆತಗಳನ್ನು ಎದುರಿಸಿದ ಹರ್ಮನ್​ಪ್ರೀತ್ ಕೌರ್ 14 ಫೋರ್​ನೊಂದಿಗೆ 65 ರನ್​ ಬಾರಿಸಿದರು. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಮೊದಲ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

7 / 7
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು