Updated on: Mar 04, 2023 | 9:53 PM
ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅಬ್ಬರಿಸಿದ್ದಾರೆ. ಗುಜರಾತ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹರ್ಮನ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ತಂಡಕ್ಕೆ ನಿರೀಕ್ಷಿತ ಆರಂಭ ದೊರೆತಿರಲಿಲ್ಲ. ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಾ ಕೇವಲ 1 ರನ್ಗಳಿಸಿ ಔಟಾಗಿದ್ದರು. ಇದಾಗ್ಯೂ ಹೇಲಿ ಮ್ಯಾಥ್ಯೂಸ್ (47) ಹಾಗೂ ಬ್ರಂಟ್ (23) ರನ್ ಬಾರಿಸುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ತಂಡಕ್ಕೆ ನಿರೀಕ್ಷಿತ ಆರಂಭ ದೊರೆತಿರಲಿಲ್ಲ. ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಾ ಕೇವಲ 1 ರನ್ಗಳಿಸಿ ಔಟಾಗಿದ್ದರು. ಇದಾಗ್ಯೂ ಹೇಲಿ ಮ್ಯಾಥ್ಯೂಸ್ (47) ಹಾಗೂ ಬ್ರಂಟ್ (23) ರನ್ ಬಾರಿಸುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹರ್ಮನ್ಪ್ರೀತ್ ಕೌರ್ ಅಕ್ಷರಶಃ ಅಬ್ಬರಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಮುಂಬೈ ಇಂಡಿಯನ್ಸ್ ನಾಯಕಿ ಫೋರ್ಗಳ ಸುರಿಮಳೆಗೈದರು. ಅದರಲ್ಲೂ ಮೋನಿಕಾ ಪಟೇಲ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 4 ಫೋರ್ ಬಾರಿಸಿ ಅಬ್ಬರಿಸಿದರು.ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹರ್ಮನ್ಪ್ರೀತ್ ಕೌರ್ ಅಕ್ಷರಶಃ ಅಬ್ಬರಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಮುಂಬೈ ಇಂಡಿಯನ್ಸ್ ನಾಯಕಿ ಫೋರ್ಗಳ ಸುರಿಮಳೆಗೈದರು. ಅದರಲ್ಲೂ ಮೋನಿಕಾ ಪಟೇಲ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 4 ಫೋರ್ ಬಾರಿಸಿ ಅಬ್ಬರಿಸಿದರು.
ಪರಿಣಾಮ ಕೇವಲ 22 ಎಸೆತಗಳಲ್ಲಿ ಹರ್ಮನ್ಪ್ರೀತ್ ಕೌರ್ ಅರ್ಧಶತಕವನ್ನು ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ ಭಾರತೀಯ ಆಟಗಾರ್ತಿ ಎಂಬ ದಾಖಲೆ ಬರೆದರು. ಇದಕ್ಕೂ ಮುನ್ನ ಈ ದಾಖಲೆ ಸ್ಮೃತಿ ಮಂಧಾನ ಹೆಸರಿನಲ್ಲಿತ್ತು.
ಸ್ಮೃತಿ ಮಂಧಾನ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದು ಟಿ20 ಕ್ರಿಕೆಟ್ನಲ್ಲಿ ಭಾರತೀಯ ಆಟಗಾರ್ತಿಯಿಂದ ಮೂಡಿಬಂದ ಅತ್ಯಂತ ವೇಗದ ಅರ್ಧಶತಕವಾಗಿತ್ತು.
ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ 22 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಹರ್ಮನ್ಪ್ರೀತ್ ಕೌರ್ ಅತ್ಯಂತ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಕೇವಲ 30 ಎಸೆತಗಳನ್ನು ಎದುರಿಸಿದ ಹರ್ಮನ್ಪ್ರೀತ್ ಕೌರ್ 14 ಫೋರ್ಗಳೊಂದಿಗೆ 65 ರನ್ ಚಚ್ಚಿದರು. ಈ ಬಿರುಸಿನ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 207 ರನ್ಗಳಿಸಿತು.