ದೇಶದೆಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇತ್ತ ಬಣ್ಣದೋಕುಳಿಯ ಹಬ್ಬದಂದು ಆರ್ಸಿಬಿ ಆಟಗಾರ್ತಿಯರು ಕೂಡ ರಂಗು ರಂಗಿನ ಬಣ್ಣಗಳೊಂದಿಗೆ ಸಂಭ್ರಮಿಸಿದ್ದಾರೆ.
ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ಆರ್ಸಿಬಿ ಕಳೆದ 2 ದಿನ ನಿರಾಸೆಯಲ್ಲಿತ್ತು. ಆದರೆ ಮಂಗಳವಾರ ಹೋಳಿ ಹಬ್ಬದ ಸಂಭ್ರಮದೊಂದಿಗೆ ಆರ್ಸಿಬಿ ಮತ್ತೆ ಹೊಸ ಉತ್ಸಾಹದಲ್ಲಿ ಕಾಣಿಸಿಕೊಂಡಿದೆ.
ವಿಶೇಷವಾಗಿ ತಂಡದಲ್ಲಿರುವ ವಿದೇಶಿ ಆಟಗಾರ್ತಿಯರಾದ ಹೀದರ್ ನೈಟ್, ಮೇಗನ್ ಶಟ್, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ ಮೊದಲ ಬಾರಿಗೆ ಹೋಳಿಯನ್ನು ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.
ಇನ್ನು ತಂಡದ ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್ ಸೇರಿದಂತೆ ಎಲ್ಲಾ ಸದಸ್ಯರು ಸಡಗರದೊಂದಿಗೆ ಬಣ್ಣವನ್ನು ಹಚ್ಚುತ್ತಾ, ಹಚ್ಚಿಸಿಕೊಳ್ಳುತ್ತಾ ಸಂತಸದಿಂದ ಕುಣಿದಾಡಿದರು.
ಇದೀಗ ಆರ್ಸಿಬಿ ತಂಡದ ಆಟಗಾರ್ತಿಯರ ಹೋಳಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ಆರ್ಸಿಬಿ 2 ಮ್ಯಾಚ್ನಲ್ಲೂ ಸೋತಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 143 ರನ್ಗಳಿಂದ ಹೀನಾಯವಾಗಿ ಸೋತಿದ್ದ ಸ್ಮೃತಿ ಮಂಧಾನ ಪಡೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ಗಳಿಂದ ಸೋಲನುಭವಿಸಿತ್ತು.
ಮಾರ್ಚ್ 8 ರಂದು ಆರ್ಸಿಬಿ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜಯದ ಖಾತೆ ತೆರೆಯಲಿದೆಯಾ ಕಾದು ನೋಡಬೇಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಮೇಗನ್ ಸ್ಚುಟ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್, ಡೇನ್ ವ್ಯಾನ್ ನೀಕರ್ಕ್, ಇಂದ್ರಾಣಿ ರಾಯ್, ಎರಿನ್ ಬರ್ನ್ಸ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕ ಪಾಟೀಲ್, ಕೋಮಲ್ ಝಂಝಾದ್.
Published On - 4:37 pm, Tue, 7 March 23