Updated on: Mar 05, 2023 | 5:32 PM
ಇಂದು ಮಹಿಳಾ ಪ್ರೀಮಿಯರ್ ಲೀಗ್ನ 2ನೇ ದಿನವಾಗಿದ್ದು, ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಡೆಲ್ಲಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ 20 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 223 ರನ್ ಗಳಿಸಿದೆ. ತಂಡದ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶಫಾಲಿ ವರ್ಮಾ ಆರ್ಸಿಬಿ ಬೌಲರ್ಗಳ ಬೆವರಿಳಿಸಿದ್ದಾರೆ.
ಈ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ಬಂದ ಕೂಡಲೇ ಅಬ್ಬರಿಸಲು ಆರಂಭಿಸಿದರು. ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರೊಂದಿಗೆ ಬಿರುಗಾಳಿಯ ಶೈಲಿಯಲ್ಲಿ ರನ್ ಗಳಿಸಿದರು ಮತ್ತು ಶತಕದ ಜೊತೆಯಾಟವನ್ನು ಹಂಚಿಕೊಂಡರು. ಇದರೊಂದಿಗೆ ಈ ಲೀಗ್ನ ಇತಿಹಾಸದಲ್ಲಿ ಮೊದಲ ಶತಕದ ಜೊತೆಯಾಟ ಆಡಿದ ದಾಖಲೆ ಕೂಡ ಬರೆದರು. ಇಬ್ಬರೂ ಮೊದಲ ವಿಕೆಟ್‌ಗೆ 162 ರನ್‌ಗಳ ಜತೆಯಾಟವಾಡಿದರು.
ಈ ಪಂದ್ಯದಲ್ಲಿ 31 ಎಸೆತಗಳಲ್ಲಿ 50 ರನ್ ಪೂರೈಸುವುದರೊಂದಿಗೆ ಈ ಲೀಗ್ನಲ್ಲಿ ಅರ್ಧ ಶತಕ ಗಳಿಸಿದ ಎರಡನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.
ಶಫಾಲಿ ಬ್ಯಾಟಿಂಗ್ ಮಾಡುತ್ತಿದ್ದ ರೀತಿಯನ್ನು ನೋಡಿದಾಗ, ಅವರು ಈ ಲೀಗ್ನ ಮೊದಲ ಶತಕ ಬಾರಿಸುತ್ತಾರೆ ಎಂದು ತೋರುತ್ತಿತ್ತು. ಆದರೆ ಹೀದರ್ ನೈಟ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದಳು. 15 ನೇ ಓವರ್‌ನ ಐದನೇ ಎಸೆತದಲ್ಲಿ ಶಫಾಲಿ ಔಟಾದರು.
ತಮ್ಮ ಇನ್ನಿಂಗ್ಸ್ನಲ್ಲಿ 45 ಎಸೆತಗಳನ್ನು ಎದುರಿಸಿದ ಶಪಾಲಿ,10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 84 ರನ್ ಗಳಿಸಿ ಔಟಾದರು.