ಚೊಚ್ಚಲ ಆವೃತ್ತಿಯ ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಡಬ್ಲ್ಯೂಪಿಎಲ್ 2023 ಆರಂಭಕ್ಕೆ ಎರಡು ದಿನಗಳಷ್ಟೇ ಬಾಕಿಯಿದೆ. ಮಾರ್ಚ್ 4 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದ್ದು ಮಾರ್ಚ್ 26ರವರೆಗೆ ನಡೆಯಲಿದೆ. ಮೊದಲ ಆವೃತ್ತಿಯ ಟೂರ್ನಿಯಲ್ಲಿ ಐದು ಫ್ರಾಂಚೈಸಿಗಳು ಒಂದು ಕಪ್ಗಾಗಿ ಪೈಪೋಟಿ ನಡೆಸಲಿದೆ.
ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜಯಂಟ್ಸ್, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯು.ಪಿ ವಾರಿಯರ್ಸ್ ಹೀಗೆ ಐದು ತಂಡಗಳ ನಡುವೆ ಪಂದ್ಯಗಳು ನಡೆಯಲಿದ್ದು, ಈಗಾಗಲೇ ಎಲ್ಲ ಟೀಮ್ ಭರ್ಜರಿ ಅಭ್ಯಾಸ ನಡೆಸುತ್ತಿದೆ.
ಆರ್ಸಿಬಿ ಮಹಿಳಾ ತಂಡದ ಆಟಗಾರ್ತಿಯರು ಕೂಡ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ಆರ್ಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಆಟಗಾರ್ತಿಯರು ಬ್ಯಾಟಿಂಗ್, ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿತ್ತು.
ಇದೀಗ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ತಂಡ ಸೇರಿಕೊಂಡಿದ್ದಾರೆ. ಈ ಬಗ್ಗೆ ಆರ್ಸಿಬಿ ತನ್ನ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದು, ಸ್ಮೃತಿ ಮಂಧಾನ ನಮ್ಮ ಮನೆಗೆ ತಲುಪಿದ್ದಾರೆ, ಅವರಿಗೆ ಸ್ವಾಗತ ಎಂದು ಬರೆದು ಫೋಟೋ ಹಂಚಿಕೊಂಡಿದೆ.
ಸ್ಮೃತಿ ಮಂಧಾನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ.
ಮಾರ್ಚ್ 4 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಟೂರ್ನಿಯಲ್ಲಿ ಒಟ್ಟು 20 ಲೀಗ್ ಪಂದ್ಯಗಳು ಮತ್ತು 2 ಪ್ಲೇ-ಆಫ್ಸ್ ಪಂದ್ಯಗಳು ಸೇರಿ 23 ದಿನ ನಡೆಯಲಿದೆ.
ಆರ್ಸಿಬಿ ಮಹಿಳಾ ತಂಡ ಸಾಕಷ್ಟು ಬಲಿಷ್ಠವಾಗಿದ್ದು ಸ್ಟಾರ್ ಆಟಗಾರ್ತಿಯರಿಂದ ಕೂಡಿದೆ. ಸ್ಮೃತಿ ಮಂದಾನ, ಎಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಡಿವೈನ್, ರೇಣುಕಾ ಸಿಂಗ್, ಎರಿನ್ ಬರ್ನ್ಸ್ ಅವರಂತಹ ಅಪಾಯಕಾರಿ ಪ್ಲೇಯರ್ಸ್ ತಂಡದಲ್ಲಿದ್ದಾರೆ.
ಆರ್ಸಿಬಿ ಮಹಿಳಾ ತಂಡ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲಿಸ್ಸಾ ಪೆರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಆಶಾ ಶೋಬನಾ, ಹೆದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪ್ರೀತಿ ಬೋಸ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಮೇಗನ್ ಶುಟ್, ಕೋಮಲ್ ಝಂಜಾದ್, ಪೂನಮ್ ಖೇಮ್ನಾರ್.
Published On - 10:33 am, Thu, 2 March 23