AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024 Awards List: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಸ್ಮೃತಿ ಮಂಧಾನ ಮುಂದಾಳತ್ವದ ಆರ್​ಸಿಬಿ ತಂಡವು ಈ ಸಾಧನೆ ಮಾಡಿದೆ.

TV9 Web
| Edited By: |

Updated on: Mar 18, 2024 | 8:52 AM

Share
ವುಮೆನ್ಸ್​ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ಕ್ಕೆ ತೆರೆಬಿದ್ದಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದೊಂದಿಗೆ ಆರ್​ಸಿಬಿ ಆಟಗಾರ್ತಿಯರು ಹಲವು ಪ್ರಶಸ್ತಿಗಳನ್ನೂ ಕೂಡ ಪಡೆದಿದ್ದಾರೆ. ಆ ಪ್ರಶಸ್ತಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 13
ಉದಯೋನ್ಮುಖ ಆಟಗಾರ್ತಿ: ಈ ಬಾರಿಯ ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ ಪಾಟೀಲ್​ಗೆ ಒಲಿದಿದೆ. ಈ ಪ್ರಶಸ್ತಿಯೊಂದಿಗೆ ಕನ್ನಡತಿ 5 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ.

2 / 13
ಆರೆಂಜ್ ಕ್ಯಾಪ್: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಸೀಸನ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಆಸ್ಟ್ರೇಲಿಯನ್ ಆಟಗಾರ್ತಿಗೆ 5 ಲಕ್ಷ ರೂ. ಬಹುಮಾನ ಮೊತ್ತ ಸಿಕ್ಕಿದೆ.

3 / 13
ಪರ್ಪಲ್ ಕ್ಯಾಪ್: ಈ ಬಾರಿಯ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸಿ ಮಿಂಚಿದ್ದ ಶ್ರೇಯಾಂಕಾ ಪಾಟೀಲ್ ಪರ್ಪಲ್ ಕ್ಯಾಪ್ ಜೊತೆ 5 ಲಕ್ಷ ರೂ. ಮೊತ್ತವನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 13
ಅತ್ಯುತ್ತಮ ಸ್ಟ್ರೈಕ್ ರೇಟ್ ಪ್ರಶಸ್ತಿ: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ ಪ್ರದರ್ಶಿಸಿದ್ದ ಆರ್​ಸಿಬಿ ಆಟಗಾರ್ತಿ ಜಾರ್ಜಿಯಾ ವೇರ್‌ಹ್ಯಾಮ್​ 5 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ.

5 / 13
ಫೈನಲ್ ಪಂದ್ಯದ ಆಟಗಾರ್ತಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದ ಸೋಫಿ ಮೊಲಿನೊ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಯೊಂದಿಗೆ 2.5 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ.

6 / 13
ಹೆಚ್ಚು ಸಿಕ್ಸ್‌ಗಳ ಪ್ರಶಸ್ತಿ: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ್ತಿ ಶಫಾಲಿ ವರ್ಮಾ 5 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ.

7 / 13
ಕ್ಯಾಚ್ ಆಫ್ ದಿ ಸೀಸನ್: ಡಬ್ಲ್ಯೂಪಿಎಲ್​ 2023 ರಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದು ಮಿಂಚಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರ್ತಿ ಎಸ್. ಸಜನಾ ಅವರಿಗೆ 5 ಲಕ್ಷ ರೂ. ಬಹುಮಾನ ಮೊತ್ತ ಸಿಕ್ಕಿದೆ.

8 / 13
ಅತ್ಯಂತ ಮೌಲ್ಯಯುತ ಆಟಗಾರ್ತಿ: ಈ ಬಾರಿಯ ಡಬ್ಲ್ಯೂಪಿಎಲ್​ನ ಅತ್ಯಂತ ಮೌಲ್ಯಯುತ ಆಟಗಾರ್ತಿಯಾಗಿ ಯುಪಿ ವಾರಿಯರ್ಸ್ ತಂಡದ ದೀಪ್ತಿ ಶರ್ಮಾ ಹೊರಹೊಮ್ಮಿದ್ದಾರೆ. ಈ ಪ್ರಶಸ್ತಿಯೊಂದಿಗೆ ದೀಪ್ತಿ 5 ಲಕ್ಷ ರೂ. ಬಹುಮಾನ ಮೊತ್ತ ಪಡೆದಿದ್ದಾರೆ.

9 / 13
ಫೈನಲ್ ಸಿಕ್ಸ್ ಪ್ರಶಸ್ತಿ: ಫೈನಲ್ ಪಂದ್ಯದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಶಫಾಲಿ ವರ್ಮಾ 1 ಲಕ್ಷ ರೂ. ಬಹುಮಾನ ಮೊತ್ತವನ್ನು ತಮ್ಮದಾಗಿಸಿಕೊಂಡಿದ್ದಾರೆ.

10 / 13
ಫೇರ್ ಪ್ಲೇ ಪ್ರಶಸ್ತಿ: ಟೂರ್ನಿಯುದ್ದಕ್ಕೂ ಅತ್ಯುತ್ತಮ ಕ್ರೀಡಾ ಸ್ಪೂರ್ತಿಯೊಂದಿಗೆ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫೇರ್ ಪ್ಲೇ ಅವಾರ್ಡ್ ಒಲಿದಿದೆ. ಈ ಪ್ರಶಸ್ತಿಯೊಂದಿಗೆ ಆರ್​ಸಿಬಿ ತಂಡ 5 ಲಕ್ಷ ರೂ. ಪಡೆದುಕೊಂಡಿದೆ.

11 / 13
ವಿನ್ನರ್: ಫೈನಲ್ ಪಂದ್ಯದಲ್ಲಿ ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿಯೊಂದಿಗೆ 6 ಕೋಟಿ ರೂ. ಬಹುಮಾನ ಮೊತ್ತ ಪಡೆದುಕೊಂಡಿದೆ.

12 / 13
ರನ್ನರ್ ಅಪ್: ಆರ್​ಸಿಬಿ ವಿರುದ್ಧ ಫೈನಲ್ ಪಂದ್ಯದಲ್ಲಿ ಸೋತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಟ್ರೋಫಿಯೊಂದಿಗೆ 3 ಕೋಟಿ ರೂ. ಬಹುಮಾನ ಮೊತ್ತ ಪಡೆದುಕೊಂಡಿದೆ.

13 / 13
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು