AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಚಮರಿ ಅಥಾಪತ್ತು ಎಂಟ್ರಿ..!

WPL 2024: : ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಫೆಬ್ರವರಿ 23 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಮಹಿಳಾ ಕ್ರಿಕೆಟ್ ಕದನದಲ್ಲಿ ಒಟ್ಟು 22 ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಂತಿಮ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಆತಿಥ್ಯವಹಿಸಲಿದೆ.

TV9 Web
| Edited By: |

Updated on: Jan 27, 2024 | 9:58 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ಗೆ ಶ್ರೀಲಂಕಾದ ಸ್ಪೋಟಕ ಆಟಗಾರ್ತಿ ಚಮರಿ ಅಥಾಪತ್ತು (Chamari Athapaththu) ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರ್ತಿಯಾಗಿ ಎಂಬುದು ವಿಶೇಷ. ಅಂದರೆ ಈ ಹಿಂದೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಲಂಕಾ ಆಟಗಾರ್ತಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

1 / 6
2024ರ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಚಮರಿ ಅಥಾಪತ್ತು ಅನ್​ಸೋಲ್ಡ್ ಆಗಿದ್ದರು. ಇದಕ್ಕೂ ಮುನ್ನ 2023 ರ ಹರಾಜಿನಲ್ಲೂ ಅವರು ಬಿಕರಿಯಾಗಿರಲಿಲ್ಲ. ಇದೀಗ ಬದಲಿ ಆಟಗಾರ್ತಿಯಾಗಿ ಯುಪಿ ವಾರಿಯರ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

2 / 6
ಈ ಬಾರಿಯ ಆಕ್ಷನ್​ನಲ್ಲಿ ಯುಪಿ ವಾರಿಯರ್ಸ್ ಖರೀದಿಸಿದ್ದ ಇಂಗ್ಲೆಂಡ್ ಆಟಗಾರ್ತಿ ಲಾರೆನ್ ಬೆಲ್ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರ್ತಿಯಾಗಿ ಶ್ರೀಲಂಕಾ ತಂಡದ ನಾಯಕಿ ಚಮರಿ ಅಥಾಪತ್ತು ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ.

3 / 6
ಶ್ರೀಲಂಕಾ ಪರ 122 ಟಿ20 ಪಂದ್ಯಗಳನ್ನಾಡಿರುವ ಚಮರಿ ಅಥಾಪತ್ತು ಸ್ಪೋಟಕ ಬ್ಯಾಟಿಂಗ್​ಗೆ ಹೆಸರುವಾಸಿ. ಈಗಾಗಲೇ 120 ಇನಿಂಗ್ಸ್​ಗಳ ಮೂಲಕ 2651 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 40 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

4 / 6
ಇದೀಗ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡಕ್ಕೆ ಚಮರಿ ಅಥಾಪತ್ತು ಆಯ್ಕೆಯಾಗಿದ್ದು, ಈ ಮೂಲಕ ಶ್ರೀಲಂಕಾ ತಂಡದ ನಾಯಕಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

5 / 6
ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಚಮರಿ ಅಥಾಪತ್ತು*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್