AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಂದಿಗೆ ಹೀಲಿಯ ಭುಜಬಲದ ಪರಾಕ್ರಮ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಯುಪಿ ವಾರಿಯರ್ಸ್ ತಂಡವು ಯಶಸ್ವಿಯಾಗಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದು, ಇದರಿಂದಾಗಿ ಕೆಲ ಕಾಲ ಪಂದ್ಯಕ್ಕೆ ಅಡಚಣೆ ಉಂಟಾಯಿತು. ಈ ಸನ್ನಿವೇಶದ ಫೋಟೋಗಳು ಇದೀಗ ವೈರಲ್ ಆಗಿದೆ.

TV9 Web
| Edited By: |

Updated on:Feb 29, 2024 | 8:54 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 6ನೇ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದಾರೆ. ಬುಧವಾರ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿತ್ತು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್​ ತಂಡದ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು  ಬ್ಯಾಟಿಂಗ್ ಮಾಡಿತು. ಇನಿಂಗ್ಸ್​ನ ಅಂತ್ಯದ ವೇಳೆಗೆ ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ.

2 / 5
ತಕ್ಷಣವೇ ಎಚ್ಚೆತ್ತುಕೊಂಡ ಯುಪಿ ವಾರಿಯರ್ಸ್ ತಂಡದ ನಾಯಕಿ/ ವಿಕೆಟ್ ಕೀಪರ್ ಅಲಿಸ್ಸಾ ಹೀಲಿ, ಮೈದಾನದಕ್ಕೆ ನುಗ್ಗಿದ ಅಭಿಮಾನಿಯನ್ನು ತಡೆದರು. ಅಲ್ಲದೆ ಪಿಚ್​ನತ್ತ ಓಡಿ ಬಂದವನಿಗೆ ತನ್ನ ಭುಜಬಲವನ್ನು ತೋರಿಸಿದ ಅಲಿಸ್ಸಾ, ಆತನನ್ನು ಹಿಡಿಯುವಲ್ಲಿ ಸಹಕರಿಸಿದರು.

3 / 5
ಇದೇ ವೇಳೆ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಅಲಿಸ್ಸಾ ಹೀಲಿ ಅವರ ಭುಜಬಲದ ಪ್ರರಾಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಘಟನೆಯ ಬಳಿಕ ಪಂದ್ಯ ಮುಂದುವರೆಸಿ ಮುಂಬೈ ಇಂಡಿಯನ್ಸ್ ತಂಡದ ಇನಿಂಗ್ಸ್​ ಕೊನೆಗೊಳಿಸಲಾಯಿತು.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್ ಕಳೆದುಕೊಂಡು 161 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ಪರ ಕಿರಣ್ ನವಗಿರೆ (57) ಭರ್ಜರಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಯುಪಿ ವಾರಿಯರ್ಸ್ ತಂಡವು 16.3 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿದೆ.

5 / 5

Published On - 8:54 am, Thu, 29 February 24

Follow Us
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್

ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ

ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್

ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು

ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ