WPL 2024: ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಂದಿಗೆ ಹೀಲಿಯ ಭುಜಬಲದ ಪರಾಕ್ರಮ
TV9 Web | Updated By: ಝಾಹಿರ್ ಯೂಸುಫ್
Updated on:
Feb 29, 2024 | 8:54 AM
WPL 2024: ವುಮೆನ್ಸ್ ಪ್ರೀಮಿಯರ್ ಲೀಗ್ನ 6ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಯುಪಿ ವಾರಿಯರ್ಸ್ ತಂಡವು ಯಶಸ್ವಿಯಾಗಿದೆ. ಈ ಪಂದ್ಯದ ಮೊದಲ ಇನಿಂಗ್ಸ್ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದು, ಇದರಿಂದಾಗಿ ಕೆಲ ಕಾಲ ಪಂದ್ಯಕ್ಕೆ ಅಡಚಣೆ ಉಂಟಾಯಿತು. ಈ ಸನ್ನಿವೇಶದ ಫೋಟೋಗಳು ಇದೀಗ ವೈರಲ್ ಆಗಿದೆ.
1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ (WPL 2024) 6ನೇ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದಾರೆ. ಬುಧವಾರ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿತ್ತು.
2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ತಂಡದ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್ನ ಅಂತ್ಯದ ವೇಳೆಗೆ ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ.
3 / 5
ತಕ್ಷಣವೇ ಎಚ್ಚೆತ್ತುಕೊಂಡ ಯುಪಿ ವಾರಿಯರ್ಸ್ ತಂಡದ ನಾಯಕಿ/ ವಿಕೆಟ್ ಕೀಪರ್ ಅಲಿಸ್ಸಾ ಹೀಲಿ, ಮೈದಾನದಕ್ಕೆ ನುಗ್ಗಿದ ಅಭಿಮಾನಿಯನ್ನು ತಡೆದರು. ಅಲ್ಲದೆ ಪಿಚ್ನತ್ತ ಓಡಿ ಬಂದವನಿಗೆ ತನ್ನ ಭುಜಬಲವನ್ನು ತೋರಿಸಿದ ಅಲಿಸ್ಸಾ, ಆತನನ್ನು ಹಿಡಿಯುವಲ್ಲಿ ಸಹಕರಿಸಿದರು.
4 / 5
ಇದೇ ವೇಳೆ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಅಲಿಸ್ಸಾ ಹೀಲಿ ಅವರ ಭುಜಬಲದ ಪ್ರರಾಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಘಟನೆಯ ಬಳಿಕ ಪಂದ್ಯ ಮುಂದುವರೆಸಿ ಮುಂಬೈ ಇಂಡಿಯನ್ಸ್ ತಂಡದ ಇನಿಂಗ್ಸ್ ಕೊನೆಗೊಳಿಸಲಾಯಿತು.
5 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್ ಕಳೆದುಕೊಂಡು 161 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ಪರ ಕಿರಣ್ ನವಗಿರೆ (57) ಭರ್ಜರಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಯುಪಿ ವಾರಿಯರ್ಸ್ ತಂಡವು 16.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿದೆ.
Published On - 8:54 am, Thu, 29 February 24