- Kannada News Photo gallery Cricket photos WPL 2024 Points Table check RCB Mumabi Indians Womens and all team Position
WPL Points Table: ಡಬ್ಲ್ಯೂಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲಿ ದೊಡ್ಡ ಬದಲಾವಣೆ: ಆರ್ಸಿಬಿಗೆ ಎಷ್ಟನೇ ಸ್ಥಾನ?
Womens Premier League 2024 - Points Table: ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. ಗುಜರಾತ್ -1.278 ರನ್ರೇಟ್ ಹೊಂದಿದೆ.
Updated on: Mar 09, 2024 | 7:32 AM

ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಹದಿನೈದು ಪಂದ್ಯಗಳು ಮುಕ್ತಾಯಗೊಂಡಿದೆ. ಶುಕ್ರವಾರ ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್ 1 ರನ್ಗಳ ರೋಚಕ ಜಯ ಕಂಡಿತು. ಇದೀಗ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಬದಲಾವಣೆ ಆಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಇವರು ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಕೇವಲ ಎರಡರಲ್ಲಿ ಸೋಲು ಕಂಡು ಒಟ್ಟು ಎಂಟು ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್ರೇಟ್ +1.059 ಆಗಿದೆ.

ಹರ್ಮನ್ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಎರಡನೇ ಸ್ಥಾನದಲ್ಲಿದೆ. ಇವರು ಆಡಿರುವ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 8 ಅಂಕ ಸಂಪಾದಿಸಿದೆ. ಮುಂಬೈ ರನ್ರೇಟ್ +0.375 ಆಗಿದೆ.

ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದೆ. ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಆರ್ಸಿಬಿ ಒಟ್ಟು 6 ಅಂಕ ಸಂಪಾದಿಸಿ 3ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್ರೇಟ್ +0.038 ಆಗಿದೆ.

ಯುಪಿ ವಾರಿಯರ್ಸ್ ತಂಡ ಆರ್ಸಿಬಿ ವಿರುದ್ಧ ಸೋತು ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಮೂರು ಗೆಲುವು ಕಂಡು 6 ಅಂಕ ಪಡೆದುಕೊಂಡಿದೆ. ಯುಪಿ ರನ್ರೇಟ್ -0.365 ಆಗಿದೆ.

ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. ಗುಜರಾತ್ -1.278 ರನ್ರೇಟ್ ಹೊಂದಿದೆ.
