AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL Prize Money 2024: ಡಬ್ಲ್ಯುಪಿಎಲ್ ವಿನ್ನರ್, ರನ್ನರ್​ಅಪ್​ಗೆ ಸಿಗುವ ಬಹುಮಾನವೆಷ್ಟು?

WPL Prize Money 2024: ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳಿಗೂ ಇದು ಚೊಚ್ಚಲ ಪ್ರಶಸ್ತಿಯಾಗಿರುವುದರಿಂದ ಯಾವ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಈ ನಡುವೆ ಈ ಲೀಗ್​ನ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಚರ್ಚೆ ಶುರುವಾಗಿದೆ.

ಪೃಥ್ವಿಶಂಕರ
|

Updated on: Mar 16, 2024 | 7:03 PM

Share
ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿಯ ಫೈನಲ್ ಪಂದ್ಯ ಇದೇ ಭಾನುವಾರ ಅಂದರೆ ಮಾರ್ಚ್​ 17 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

1 / 6
ಎರಡೂ ತಂಡಗಳಿಗೂ ಇದು ಚೊಚ್ಚಲ ಪ್ರಶಸ್ತಿಯಾಗಿರುವುದರಿಂದ ಯಾವ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಈ ನಡುವೆ ಈ ಲೀಗ್​ನ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಚರ್ಚೆ ಶುರುವಾಗಿದೆ.

2 / 6
ವಾಸ್ತವವಾಗಿ ಎರಡನೇ ಆವೃತ್ತಿಯ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಗಳಿಗೆ ನೀಡಲಾಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಕಳೆದ ಆವೃತ್ತಿಯ ವಿಜೇತರಿಗೆ ನೀಡಿದ ಬಹುಮಾನದ ಮೊತ್ತವನ್ನೇ ಈ ಬಾರಿಯೂ ನೀಡುವ ಸಾಧ್ಯತೆಗಳಿವೆ.

3 / 6
ಕಳೆದ ಬಾರಿ ಅಂದರೆ ಚೊಚ್ಚಲ ಆವೃತ್ತಿಯ ವಿಜೇತ ತಂಡವಾಗಿದ್ದ ಮುಂಬೈ ಇಂಡಿಯನ್ಸ್​ಗೆ 6 ಕೋಟಿ ರೂ. ಬಹುಮಾನವನ್ನು ನೀಡಲಾಗಿತ್ತು. ಹಾಗೆಯೇ ಕಳೆದ ಬಾರಿಯ ರನ್ನರ್ ಅಪ್ ತಂಡಕ್ಕೆ 3 ಕೋಟಿ ರೂಪಾಯಿ ಬಹುಮಾನವನ್ನು ನೀಡಲಾಗಿತ್ತು.

4 / 6
ಇನ್ನು ಎರಡನೇ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ 1 ಕೋಟಿ ರೂ ಬಹುಮಾನ ಸಿಗಲಿದೆ. ಏಕೆಂದರೆ ಕಳೆದ ಬಾರಿಯೂ ಮೂರನೇ ಸ್ಥಾನ ಪಡೆದುಕೊಂಡಿದ್ದ ತಂಡಕ್ಕೆ ಇದೇ ಮೊತ್ತವನ್ನು ಬಹುಮಾನವನ್ನಾಗಿ ನೀಡಲಾಗಿತ್ತು.

5 / 6
ತಂಡದ ಜತೆಗೆ ಆಟಗಾರ್ತಿಯರು ಕೂಡ ತಮ್ಮ ವೈಯಕ್ತಿಕ ಪ್ರದರ್ಶನದ ಆಧಾರದ ಮೇಲೆ ಬಹುಮಾನ ಪಡೆಯಲ್ಲಿದ್ದು, ಅದರಂತೆ ಸೀಸನ್​ನ ಆಟಗಾರ್ತಿಗೆ 5 ಲಕ್ಷ, ಆರೆಂಜ್ ಕ್ಯಾಪ್‌ಗೆ 5 ಲಕ್ಷ, ಪರ್ಪಲ್ ಕ್ಯಾಪ್‌ಗೆ 5 ಲಕ್ಷ, ಕ್ಯಾಚ್ ಆಫ್ ದಿ ಸೀಸನ್‌ಗೆ 5 ಲಕ್ಷ, ಈ ಆವೃತ್ತಿಯ ಉದಯೋನ್ಮುಖ ಆಟಗಾರ್ತಿಗೆ 5 ಲಕ್ಷ, ಸೀಸನ್‌ನ ಪವರ್‌ಫುಲ್ ಸ್ಟ್ರೈಕರ್ 5 ಲಕ್ಷ, ಪಂದ್ಯದ ಆಟಗಾರ್ತಿ (ಫೈನಲ್ ) 2.5 ಲಕ್ಷ, ಸ್ಟ್ರೈಕರ್ ಆಫ್ ದಿ ಮ್ಯಾಚ್ 1 ಲಕ್ಷ ರೂ. ಬಹುಮಾನ ಸಿಗಲಿದೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ

ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು