WPL 2024: 6 ಗೆಲುವು, 4 ಸೋಲು; ಡಬ್ಲ್ಯುಪಿಎಲ್​ನಲ್ಲಿ ಆರ್​ಸಿಬಿ ಪಯಣ ಹೇಗಿತ್ತು?

WPL 2024: ಡಬ್ಲ್ಯುಪಿಎಲ್​ನ ಎರಡನೇ ಆವೃತ್ತಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಪ್ರಶಸ್ತಿ ಎತ್ತಿ ಹಿಡಿದಿದೆ. ಲೀಗ್​ನಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದ ಆರ್​ಸಿಬಿ ತನ್ನ ಸಾಂಘೀಕ ಹೋರಾಟದಿಂದ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಪೃಥ್ವಿಶಂಕರ
|

Updated on: Mar 18, 2024 | 6:06 PM

ಡಬ್ಲ್ಯುಪಿಎಲ್​ನ ಎರಡನೇ ಆವೃತ್ತಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಪ್ರಶಸ್ತಿ ಎತ್ತಿ ಹಿಡಿದಿದೆ. ಲೀಗ್​ನಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದ ಆರ್​ಸಿಬಿ ತನ್ನ ಸಾಂಘೀಕ ಹೋರಾಟದಿಂದ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇನ್ನು ಇಡೀ ಟೂರ್ನಿಯಲ್ಲಿ ಆರ್​ಸಿಬಿ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ..

1 / 10
ಲೀಗ್​ನ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಎದುರಿಸಿದ್ದ ಆರ್​ಸಿಬಿ 2 ರನ್​ಗಳಿಂದ ಗೆಲುವು ಸಾಧಿಸಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ 157 ರನ್ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ ಯುಪಿ 155 ರನ್ ಕಲೆಹಾಕಿ 2 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು.

2 / 10
ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಸತತ 2ನೇ ಗೆಲುವು ದಾಖಲಿಸಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಗುಜರಾತ್ 107 ರನ್ ಕಲೆಹಾಕಿತ್ತು. ಗುರಿ ಬೆನ್ನಟ್ಟಿದ ಆರ್​ಸಿಬಿ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತ್ತು.

3 / 10
ಮೂರನೇ ಪಂದ್ಯದಲ್ಲಿ ಆರ್​ಸಿಬಿಗೆ ಮೊದಲ ಸೋಲು ಎದುರಾಯಿತು. ಬಲಿಷ್ಠ ಡೆಲ್ಲಿ ತಂಡದ ಎದುರು ಆರ್​ಸಿಬಿ 25 ರನ್​ಗಳಿಂದ ಸೋತಿತ್ತು. ಡೆಲ್ಲಿ ನೀಡಿದ 194 ರನ್ ಬೆನ್ನಟ್ಟಿದ ಆರ್​ಸಿಬಿ 169 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.

4 / 10
ನಾಲ್ಕನೇ ಪಂದ್ಯದಲ್ಲೂ ಸೋತಿದ್ದ ಆರ್​ಸಿಬಿಗೆ ಸತತ 2ನೇ ಸೋಲು ಎದುರಾಗಿತ್ತು. ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಿದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ 131 ರನ್​ಗಳ ಟಾರ್ಗೆಟ್ ನೀಡಿತ್ತು. ಗುರಿ ಬೆನ್ನಟ್ಟಿದ ಮುಂಬೈ 7 ವಿಕೆಟ್​ಗಳ ಸುಲಭ ಜಯ ದಾಖಲಿಸಿತ್ತು.

5 / 10
ಐದನೇ ಪಂದ್ಯದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದ ಆರ್​ಸಿಬಿ ಯುಪಿ ವಾರಿಯರ್ಸ್​ ತಂಡವನ್ನು 23 ರನ್​ಗಳಿಂದ ಮಣಿಸಿತ್ತು. ಆರ್​ಸಿಬಿ ನೀಡಿದ 198 ರನ್ ಗುರಿ ಬೆನ್ನಟ್ಟಿದ ಯುಪಿ 175 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.

6 / 10
ಆರನೇ ಪಂದ್ಯದಲ್ಲಿ ಮತ್ತೆ ಸೋಲಿನ ದವಡೆಗೆ ಸಿಲುಕಿದ ಆರ್​ಸಿಬಿ ಗುಜರಾತ್ ಜೈಂಟ್ಸ್ ವಿರುದ್ಧ 19 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು. ಗುಜರಾತ್ ನೀಡಿದ 198 ರನ್ ಗುರಿ ಬೆನ್ನಟ್ಟಿದ ಆರ್​ಸಿಬಿ 180 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

7 / 10
7ನೇ ಪಂದ್ಯದಲ್ಲೂ ಆರ್​ಸಿಬಿಗೆ ಸೋಲು ಎದುರಾಗಿತ್ತು. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ಗೆಲುವಿಗಾಗಿ ಮಾಡಿದ ಹೋರಾಟ ಸ್ಮರಣೀಯವಾಗಿತ್ತು. ಡೆಲ್ಲಿ ನೀಡಿದ 181 ರನ್ ಬೆನ್ನಟ್ಟಿದ ಆರ್​ಸಿಬಿ ಕೇವಲ 1 ರನ್​ಗಳಿಂದ ಸೋತಿತ್ತು.

8 / 10
ಲೀಗ್​ನ ಕೊನೆಯ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಿದ್ದ ಆರ್​ಸಿಬಿ ಹಾಲಿ ಚಾಂಪಿಯನ್ನರನ್ನು 7 ವಿಕೆಟ್​ಗಳಿಂದ ಮಣಿಸಿತ್ತು. ಮುಂಬೈ ನೀಡಿದ್ದ 113 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ 3 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತ್ತು.

9 / 10
ಇನ್ನು ಪಾಯಿಂಟ್ ಪಟ್ಟಿಯ ಆಧಾರದ ಮೇಲೆ ಕ್ವಾಲಿಫೈಯರ್ ಹಂತಕ್ಕೆ ಎಂಟ್ರಿಕೊಟ್ಟಿದ ಆರ್​ಸಿಬಿ, ಎಲಿಮಿನೆಟರ್ ಪಂದ್ಯದಲ್ಲಿ ಮತ್ತೊಮ್ಮೆ ಮುಂಬೈ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲೂ ಆರ್​ಸಿಬಿ, ಮುಂಬೈ ತಂಡವನ್ನು 5 ರನ್​ಗಳಿಂದ ಸೋಲಿಸಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು.

10 / 10
Follow us
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?