WPL 2024: ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್ಸಿಬಿ ತಂಡವು ಕೇವಲ 2 ರನ್ಗಳ ರೋಚಕ ಗೆಲುವು ದಾಖಲಿಸಿದೆ.